Karnataka Elections: ಮಾತನಾಡುವ ಬರದಲ್ಲಿ ನಮ್ಮ ಮೇಲೆ ನಂಬಿಕೆಯಿದ್ದರೆ ಬಿಜೆಪಿಗೆ ಮತಹಾಕಿ ಎಂದ ಸಿದ್ದರಾಮಯ್ಯ!

ವಿಜಯಪುರದ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ನಮ್ಮ ಮೇಲೆ ನಂಬಿಕೆಯಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಹೇಳಿದ್ದಾರೆ.

ವಿಜಯಪುರ, ಫೆಬ್ರವರಿ. 12: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿವೆ. ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ಮತ ಕೇಳಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ನಮ್ಮ ಮೇಲೆ ನಂಬಿಕೆಯಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಹೇಳಿದ್ದಾರೆ.

ವಿಜಯಪುರದ ಇಂಡಿ ಪಟ್ಟಣದ ಪೊಲೀಸ್ ಮೈದಾನದ ಆವರಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡುವ ಬರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೇಲೆ ನಂಬಿಕೆಯಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಹೇಳಿದ್ದಾರೆ.

Karnataka Assembly Elections 2023: Siddaramaiah asks vote for bjp

"ನಾವು ಉಚಿತವಾಗಿ ಅಕ್ಕಿ ನೀಡುತ್ತೇವೆ. ಉಚಿತವಾಗಿ 10 ಕೆಜಿ ಅಕ್ಕಿ ಪಡೆಯಬೇಕಿದ್ದರೇ, ನಮ್ಮ ಮೇಲೆ ನಂಬಿಕೆ ಇದೆ ಅಲ್ವಾ...? ನಮ್ಮ ಮೇಲೆ ವಿಶ್ವಾಸ ಇದೆ ಅಲ್ವಾ...? ಹಾಗಿದ್ರೆ ಎಲ್ಲಾ ಬಿಜೆಪಿಗೆ ಓಟು ಹಾಕಿ, ಎಲ್ಲರ ಹತ್ರ ಬಿಜೆಪಿಗೆ ಓಟು ಹಾಕಿಸಿ. ಅಲ್ಲ ಅಲ್ಲ.. ಕಾಂಗ್ರೆಸ್‌ಗೆ ಓಟ್ ಹಾಕಿ, ಕಾಂಗ್ರೆಸ್‌ಗೆ ಓಟ್ ಹಾಕಿಸಿ. ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಎಸೆಯಿರಿ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು, ಪ್ರಜಾಧ್ವನಿ ಯಾತ್ರೆಯ ವೇಳೆ ಪುಟ್ಟ ಬಾಲಕಿಯೊಬ್ಬಳು ತಾನು ಕೂಡಿಟ್ಟಿದ್ದ ಅಲ್ಪಹಣವನ್ನೇ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕೆ ನೀಡಲು ಬಂದಿರುವ ಘಟನೆ ನಡೆದಿದೆ. ಹಣ ಕೊಡಲು ಮುಂದಾದ ಮಗುವಿಗೆ ಅಪ್ಪುಗೆ ನೀಡಿ ಹಣ ಪಡೆಯದೆ ಸಿದ್ದರಾಮಯ್ಯ ವಾಪಸ್ ಕಳುಹಿಸಿದ್ದಾರೆ.

Karnataka Assembly Elections 2023: Siddaramaiah asks vote for bjp

ವಿಜಯಪುರದ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಕಾರ್ಧವನಿ ಯಾತ್ರೆಯನ್ನು ಮುನ್ನಡೆಸುತ್ತಿರುವ ಸಿದ್ದರಾಮಯ್ಯ. ಶನಿವಾರ ಸಿಂಧಗಿ ಮತ ಕ್ಷೇತ್ರದಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ್ದರು. ಸ್ವಾತಂತ್ರ್ಯ ಬಂದ ನಂತರದಿಂದ ನಾನು ಅಧಿಕಾರದಿಂದ ಇಳಿಯುವರೆಗೂ ರಾಜ್ಯದ ಒಟ್ಟು ಸಾಲ 2 ಲಕ್ಷದ 42 ಸಾವಿರ ಕೋಟಿ ರೂಪಾಯಿ ಇತ್ತು. ಈಗ ರಾಜ್ಯದ ಒಟ್ಟು ಸಾಲ 5 ಲಕ್ಷದ 40 ಸಾವಿರ ಕೋಟಿ ದಾಟಿದೆ. ನನ್ನ ನಂತರ ಬಂದ ಮುಖ್ಯಮಂತ್ರಿಗಳು ರಾಜ್ಯದ ಸಾಲವನ್ನು ದುಪ್ಪಟ್ಟು ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+