ಸಿಂದಗಿ ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಘೋಷಿಸಿದ ಜೆಡಿಎಸ್

ವಿಜಯಪುರ, ಅಕ್ಟೋಬರ್ 1: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30- 35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿಯನ್ನು ಆಯ್ಕೆ ಮಾಡಿದ್ದಾರೆ.

"ನಾಜಿಯಾ ಶಕೀಲಾ ಅಂಗಡಿ ಎಂ.ಎ., ಬಿ.ಎಡ್. ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ," ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

"ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ ,"ಎಂದಿದ್ದಾರೆ.

Karnataka By-Elections: HD Kumaraswamy Announced JDS Candidate For Sindagi

"ಪಕ್ಷ ನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿಯವರನ್ನು ಸಮಸ್ತ ಸಿಂದಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು," ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿಯನ್ನಾಗಿ ಬಿ.ಇ, ಎಂ. ಟೆಕ್ ಪದವೀಧರರಾಗಿರುವ ನಿಯಾಜ್ ಶೇಖ್‌ರನ್ನು ಆಯ್ಕೆ ಮಾಡಲಾಗಿದೆ.

"ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು," ಎಂದು ಎಚ್‌ಡಿಕೆ ಕೋರಿದ್ದಾರೆ.

ಇತ್ತೀಚೆಗಷ್ಟೇ ರಾಮನಗರ ಜಿಲ್ಲೆ ಬಿಡದಿ ಸಮೀಪದ ಕೇತುಗಾನಹಳ್ಳಿಯ ಎಚ್. ಡಿ. ಕುಮಾರಸ್ವಾಮಿ ತೋಟದ ಮನೆಯಲ್ಲಿ ನಾಲ್ಕು ದಿನಗಳ ಕಾಲ ಮಿಷನ್- 123 ಅಡಿಯಲ್ಲಿ ಜೆಡಿಎಸ್ ಕಾರ್ಯಾಗಾರ ನಡೆಸಲಾಗಿತ್ತು.

Karnataka By-Elections: HD Kumaraswamy Announced JDS Candidate For Sindagi

ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ದಿನಾಂಕ
ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 30ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ್ತು ಅಂದೇ ಫಲಿತಾಂಶ ಹೊರಬೀಳಲಿದೆ.

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿತ್ತು. ಇನ್ನು ಎಂ.ಸಿ. ಮನಗೂಳಿ ನಿಧನದಿಂದಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಮುಖ್ಯಾಂಶಗಳು
* ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಜೆಡಿಎಸ್ ಟಿಕೆಟ್

* ಪಕ್ಷ ನಿಷ್ಠೆ ಮತ್ತು ವಿದ್ಯಾರ್ಹತೆ ಗಮನಿಸಿ ಇಬ್ಬರಿಗೂ ಟಿಕೆಟ್

* ಅಲ್ಪಸಂಖ್ಯಾತ ಸಮುದಾಯದ ಯುವ ಜನರನ್ನು ಗುರುತಿಸಿದ ಕುಮಾರಸ್ವಾಮಿ

* ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗಿಂತ ಮೊದಲೇ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಜೆಡಿಎಸ್

Recommended Video

      ರಾಜಕೀಯ ಚರ್ಚೆಗೆ ಪ್ರಧಾನಿ ಮೋದಿ ತಾಯಿಯನ್ನು ಎಳೆದುತಂದ ಕಾಂಗ್ರೆಸ್ | Oneindia Kannada

      * ಪಕ್ಷದ ಪಂಚರತ್ನ ಪರಿಕಲ್ಪನೆಯಂತೆ ಇಬ್ಬರೂ ವಿದ್ಯಾವಂತರ ಆಯ್ಕೆ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+