ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಪ್ಪಿಗೆ

|
Google Oneindia Kannada News

ವಿಜಯಪುರ, ಜುಲೈ 10 : ದಶಕಗಳ ಬೇಡಿಕೆಗೆ ಕೊನೆಗೂ ಒಪ್ಪಿಗೆ ಸಿಕ್ಕಿದೆ. ಕರ್ನಾಟಕ ಸರ್ಕಾರ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸುಮಾರು 220 ಕೋಟಿ ರೂ.ಗಳು ಯೋಜನೆ ಇದಾಗಿದೆ.

ಗುರುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಮಾನ ನಿಲ್ದಾಣ ಯೋಜನೆಗೆ ಒಪ್ಪಿಗೆ ಕೊಡಲಾಗಿದೆ. ಒಟ್ಟು 2 ಹಂತದಲ್ಲಿ ಯೋಜನೆ ಕಾಮಗಾರಿ ನಡೆಯಲಿದ್ದು, ಮೊದಲ ಹಂತದ ಕಾಮಗಾರಿಗೆ 95 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ಸಿಕ್ಕಿದೆ.

ವಿಜಯಪುರ-ಹುಬ್ಬಳ್ಳಿ ಇಂಟರ್ ಸಿಟಿ ರೈಲಿನ ವಿಶೇಷತೆಗಳುವಿಜಯಪುರ-ಹುಬ್ಬಳ್ಳಿ ಇಂಟರ್ ಸಿಟಿ ರೈಲಿನ ವಿಶೇಷತೆಗಳು

ವಿಜಯಪುರದ ಮದಭಾವಿ-ಬುರಣಾಪುರ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು, ಇದಕ್ಕಾಗಿ 727 ಎಕರೆ ಜಮೀನು ಬಳಕೆಯಾಗಲಿದೆ. ವಿಜಯಪುರ ನಗರದಿಂದ ವಿಮಾನ ನಿಲ್ದಾಣದ ಸ್ಥಳ ಸುಮಾರು 15 ಕಿ. ಮೀ. ದೂರವಿದೆ.

ಜುಲೈ 31ರ ತನಕ ಅಂತರಾಷ್ಟ್ರೀಯ ವಿಮಾನ ಸಂಚಾರವಿಲ್ಲ ಜುಲೈ 31ರ ತನಕ ಅಂತರಾಷ್ಟ್ರೀಯ ವಿಮಾನ ಸಂಚಾರವಿಲ್ಲ

Karnataka Govt Approval For Vijayapura Airport

2008ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಭೂಮಿ ಪೂಜೆ ಮಾಡಲಾಗಿತ್ತು. ಆದರೆ, ಸರ್ಕಾರಗಳು ಬದಲಾದ ಬಳಿಕ ಯೋಜನೆಗೆ ಅನುದಾನ ಸಿಗದೆ ವಿಳಂಬವಾಯಿತು.

ಬೆಂಗಳೂರು ವಿಮಾನ ನಿಲ್ದಾಣದ ಒಂದು ರನ್‌ ವೇ ಬಂದ್ಬೆಂಗಳೂರು ವಿಮಾನ ನಿಲ್ದಾಣದ ಒಂದು ರನ್‌ ವೇ ಬಂದ್

ಎರಡು ವರ್ಷಗಳ ಹಿಂದೆ ವಿಮಾನ ನಿಲ್ದಾಣ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿತ್ತು. ಸತತ ಹೋರಾಟದ ಫಲವಾಗಿ ಈಗ ಸರ್ಕಾರ ವಿಮಾನ ನಿಲ್ದಾಣ ನಿರ್ಮಿಸಲು ಒಪ್ಪಿಗೆ ನೀಡಿದೆ. ಒಂದು ವರ್ಷದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಸಚಿವ ಸಂಪುಟ ಸಭೆಯ ವಿವರ ನೀಡಿದ ಸಚಿವ ಜೆ. ಸಿ. ಮಾಧುಸ್ವಾಮಿ, "ವಿಜಯಪುರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ಒಂದು ವರ್ಷದಲ್ಲಿ ಈ ನಿಲ್ದಾಣವನ್ನು ಅಭಿವೃದ್ಧಿಪಡಿಸಲಿದೆ" ಎಂದು ಹೇಳಿದರು.

English summary
Karnataka government gave administrative approval for construction of airport in Vijayapura district. Project 1st planned in 2008. Now project cost around Rs 220 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X