• search
  • Live TV
ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ

|

ವಿಜಯಪುರ, ಏ. 30:: ಕೃಷ್ಣಾ ನದಿ ಇಡೀ ಉತ್ತರ ಕರ್ನಾಟಕದ ಜೀವನದಿಯಾಗಿದ್ದು, ಈ ನೀರಿನ ಸದ್ಭಳಕೆಗಿರುವ ಕಾನೂನು ತೊಡಕುಗಳನ್ನು ನಿವಾರಣೆ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಆಲಮಟ್ಟಿ ಜಲಾಶಯದ ಪರಿವೀಕ್ಷಣೆ ಮಾಡಿದ ನಂತರ ಅವರು ಮಾಹಿತಿ ಕೊಟ್ಟಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಆಲಮಟ್ಟಿ ಜಲಾಶಯವನ್ನು 519.6 ಮೀ. ನಿಂದ 524.256 ಮೀ. ವರೆಗೆ ಹಂತ ಹಂತವಾಗಿ ಏರಿಸಬೇಕೆನ್ನುವ ಪ್ರಸ್ತಾಪ ಸರ್ಕಾರದ ಮುಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸಲಿ ಚಿಂತನೆ ನಡೆದಿದೆ ಎಂದು ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಜಾರಿಗೆ ಹಣಕಾಸಿನ ಕೊರತೆಯಿಲ್ಲ.

ನಾನು ಉತ್ತರಕರ್ನಾಟಕದವನಾಗಿದ್ದು, ಈ ಭಾಗದ ಸಮಗ್ರ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಯೋಜನೆ ಪೂರ್ಣಗೊಳಿಸಲು ಹಣಕಾಸಿನ ಕ್ರೋಡಿಕರಣಕ್ಕೂ ಚಿಂತನೆ ನಡೆದಿದೆ ಎಂದರು. ಇದು ನನ್ನ ಅಧ್ಯಯನ ಪ್ರವಾಸವಾಗಿದ್ದು, ಯೋಜನೆಗಳ ಕುರಿತು ಮಾಹಿತಿ ಪಡೆಯಲು ಬಂದಿದ್ದೇನೆ. ಕೊರೋನಾ ಲಾಕ್‌ಡೌನ್ ನಂತರ ಮತ್ತೆ ಈ ಭಾಗಕ್ಕೆ ಬಂದು ಯುಕೆಪಿ ನೀರಾವರಿ ಯೋಜನೆಗಳಿಗೆ ಚುರುಕು ಮುಟ್ಟಿಸುತ್ತೇನೆ.

ಅಭಿವೃದ್ಧಿ ಪರ ಯಾವುದೇ ಸಲಹೆಗಳಿಗೂ ಸ್ವಾಗತ ಎಂದ ಸಚಿವರು, ನೀರಾವರಿ ಕ್ಷೇತ್ರದಲ್ಲಿಯಲ್ಲಿ ಹೊಸ ಬದಲಾವಣೆ ತರುವುದೇ ನನ್ನ ಮುಂದಿರುವ ಗುರಿ ಎಂದರು.

ತಿಡಗುಂದಿ ಜಲ ಸೇತುವೆ ಇನ್ನೂ ಲೋಕಾರ್ಪಣೆಯಾಗಿಲ್ಲ: ಶಾಸಕರಿಗೆ ಅವರ ಮತಕ್ಷೇತ್ರದಲ್ಲಿ ಕಾರ್ಯಕ್ರಮ ಮಾಡುವ ಹಕ್ಕಿದೆ. ಆದರೆ ತಿಡಗುಂದಿ ವಿಷಯದಲ್ಲಿ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ತಿಡಗುಂದಿ ಜಲ ಸೇತುವೆ ಇನ್ನೂ ಲೋಕಾರ್ಪಣೆಯಾಗಿಲ್ಲ ಎಂದರು.

ತಿಡಗುಂದಿ ಕಾಲುವೆ ಲೋಕಾರ್ಪಣೆ ವಿಷಯದಲ್ಲಿ ಅಧಿಕಾರಿಗಳು ನಿಯಮವನ್ನು ಉಲ್ಲಂಘಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಬುಧವಾರ ಸಂಜೆಯೊಳಗೆ ಕ್ರಮ ಕೈಗೊಳ್ಳುವುದಾಗಿ ಎಂದು ಅವರು ತಿಳಿಸಿದರು.

English summary
Ramesh Jarakiholi said he was considering requesting the central government to declare the Krishna Upper Project as a national project. The government is proposing to step up the Alamatti Reservoir from 519.6 m. To 524.256 m.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X