ಸ್ಟ್ರಾಂಗ್ ರೂಮ್ ಕೀ ಮನೆಯಲ್ಲೇ ಮರೆತು ಬಂದ ಕರ್ನಾಟಕದ ಅಧಿಕಾರಿ
ವಿಜಯಪುರ, ಜೂನ್ 04: ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಆರಂಭವಾಗಿದ್ದು, ಬಹುತೇಕ ಎಲ್ಲಾ ಕಡೆಗಳಲ್ಲಿಯೂ ಅಂಚೆ ಮತದಾನ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದೆ. ಪ್ರತಿ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ನಡೆಯುವ ಅವಾಂತರದಂತೆ ಈ ಬಾರಿ ವಿಜಯಪುರಪುರದಲ್ಲಿ ಮತ ಎಣಿಕೆಗೂ ಮುನ್ನ ಎಡವಟ್ಟು ನಡೆದಿದೆ.
ವಿಜಯಪುರದಲ್ಲಿ ಅಧಿಕಾರಿಯೊಬ್ಬರು ಸ್ಟ್ರಾಂಗ್ ರೂಮ್ನ ಬೀಗದ ಕೈ ಮನೆಯಲ್ಲೇ ಮರೆತು ಬಂದ ಪ್ರಸಂಗ ನಡೆದಿದೆ. ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್ ಅವರು ಸ್ಟ್ರಾಂಗ್ ರೂಮ್ನ ಬೀಗದ ಕೈಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದರು.

ಸ್ಟ್ರಾಂಗ್ ರೂಮ್ನ ಲಾಕ್ ಓಪನ್ ಮಾಡಲು ಹೋದಾಗ ತಮ್ಮ ಬಳಿ ಕೀ ಇಲ್ಲದಿರುವುದು ತಿಳಿದುಬಂದಿದೆ. ತಕ್ಷಣವೇ ಶರೀಫ್ ತಮ್ಮ ಮನೆಗೆ ವಾಪಸ್ ಕೀ ತಂದು ಈಗ ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ. ಸದ್ಯ ಸ್ಟ್ರಾಂಗ್ ರೂಮ್ ಓಪನ್ ಆಗಿದ್ದು, ಮತ ಎಣಿಕೆ ಬರದಿಂದ ಸಾಗುತ್ತಿದೆ.
ಯಾರ ಕೈ ಹಿಡಿಯಲಿದ್ದಾರೆ ವಿಜಯಪುರ ಮತದಾರರು..?
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಹಾಲಿ ಸಂಸದ ರಮೇಶ್ ಜಿಗಜಣಗಿ ಈ ಕ್ಷೇತ್ರದಿಂದ ನಾಲ್ಕನೇ ಬಾರಿ ಲೋಕಸಭೇಯನ್ನು ಪ್ರವೇಶ ಪಡೆಯುವ ಹುಮ್ಮಸ್ಸಿನಲ್ಲಿದ್ದಾರೆ. ವಿಜಯಪುರದಲ್ಲಿ ಹಾಲಿ ಸಂಸದ ರಮೇಶ್ ಜಿಗಜಣಗಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇನ್ನು ಮಾಜಿ ಶಾಸಕ ರಾಜು ಅಲಗೂರ ಅವರಿಗೆ ಕಾಂಗ್ರೆಸ್ ಅವಕಾಶ ಕಲ್ಪಿಸಿದೆ. ಎರಡೂ ಪಕ್ಷಗಳು ಜಾತಿಯ ಲೆಕ್ಕಾಚಾರವನ್ನು ಹಾಕಿಕೊಂಡೇ ಟಿಕೆಟ್ ನೀಡಿವೆ. ಮೀಸಲು ಕ್ಷೇತ್ರವಾದ ಈ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆದಿದ್ದು, ಇಂದು ಮತದಾರರ ತೀರ್ಪು ಹೊರಬೀಳಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications