• search
  • Live TV
ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕ್ರೂಸರ್-ಟ್ಯಾಂಕರ್ ಭೀಕರ ಅಪಘಾತ: ಚಿತ್ತಾಪುರ ಗ್ರಾಮದ ಒಂಬತ್ತು ಮಂದಿ ಸಾವು

|

ವಿಜಯಪುರ, ಮಾರ್ಚ್ 22: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಸಿಂದಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರೆಲ್ಲರೂ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದವರು ಎನ್ನಲಾಗಿದೆ.

ಕಾರು ಅಪಘಾತ: SSLC ಪರೀಕ್ಷೆ ಬರೆಯಲು ಕಾರವಾರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು

ಶುಕ್ರವಾರ ನಸುಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಯುವಕರಾಗಿದ್ದು, ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುವವರಾಗಿದ್ದಾರೆ. ಕಾರ್ಮಿಕರು ಮತ್ತು ಅವರ ಸ್ನೇಹಿತರು ಗೋವಾ ಪ್ರವಾಸಕ್ಕೆ ತೆರಳಿದ್ದರು. ಹೋಳಿ ಹಬ್ಬ ಆಚರಿಸಿ ಪಟ್ಟಣಕ್ಕೆ ಮರಳುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸಾಗರ್ (25), ಚಾಂದ್‌ಬಾಷಾ (24), ಅಜಿಮ್ (26) ಅಂಬರೀಶ್ (28), ಕೆ.ಕೆ. ಶಾಕೀರ್ (25), ಶ್ರೀನಾಥ (30), ಯೂನುಸ್, ಗುರು (32) ಮತ್ತು ಮಗಸಾಬ (29) ಮೃತ ದುರ್ದೈವಿಗಳು.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಟ್ಯಾಂಕರ್ ಚಾಲಕ ಸಾಜಿದ್ ಇಸ್ಮಾಯಿಲ್, ಆಕಾಶ್ ದೊರೆ, ಮಲ್ಲಿಕಾರ್ಜುನ, ಮಂಜು, ಸದ್ದಾಂ ಮತ್ತು ಆನಂದ್ ಸೊಪೇಟಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕ್ಯಾಂಟರ್ ಚಾಲಕ ಸೇರಿದಂತೆ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಕ್ರೂಸರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬರುತ್ತಿದ್ದ ಕ್ರೂಸರ್ ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ, ಆಂಧ್ರಪ್ರದೇಶ ಮೂಲದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಕರ್ನಾಟಕದ ಯಾವ ಸಂಸದ ಎಷ್ಟು ವಿದ್ಯಾಭ್ಯಾಸ ಮಾಡಿದ್ದಾರೆ?

ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಪ್ರಯಾಣಿಕರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೃಶ್ಯ ಹೃದಯವಿದ್ರಾವಕವಾಗಿತ್ತು.

ಗಾಯಾಳುಗಳನ್ನು ಸಿಂದಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Eight people died and five others injured in a road accident between cruiser and tanker at Chikka Sindagi in Sindagi Taluk of Vijayapura District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more