ವಿಜಯಪುರದಲ್ಲಿ ಹೊತ್ತಿ ಉರಿದ ಬೆಂಕಿಪೊಟ್ಟಣ ತುಂಬಿದ್ದ ಲಾರಿ
ವಿಜಯಪುರ, ಫೆಬ್ರವರಿ 22: ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ಅರಕೇರಿ ತಾಂಡಾ ಸಮೀಪದ ರಾಷ್ಟ್ರೀಯ ಹೆದ್ದಾರಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಲಾರಿ ತಮಿಳುನಾಡು ಮೂಲದ್ದಾಗಿದ್ದು, ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪಾರಾಗಿದ್ದಾರೆ.

ಅರ್ಧ ಗಂಟೆ ಲಾರಿ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಬಂದ ವಿಜಯಪುರ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications