ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರದಲ್ಲಿ ಹೊತ್ತಿ ಉರಿದ ಬೆಂಕಿಪೊಟ್ಟಣ ತುಂಬಿದ್ದ ಲಾರಿ

By ವಿಜಯಪುರ ಪ್ರತಿನಿಧಿ
|
Google Oneindia Kannada News

ವಿಜಯಪುರ, ಫೆಬ್ರವರಿ 22: ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದ ಅರಕೇರಿ ತಾಂಡಾ ಸಮೀಪದ ರಾಷ್ಟ್ರೀಯ ಹೆದ್ದಾರಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಲಾರಿ ತಮಿಳುನಾಡು ಮೂಲದ್ದಾಗಿದ್ದು, ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪಾರಾಗಿದ್ದಾರೆ.

ಪಾರ್ಕ್ ಮಾಡಿದ್ದ ಮಿನಿ ಬಸ್, ಟಾಟಾ ಸುಮೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳುಪಾರ್ಕ್ ಮಾಡಿದ್ದ ಮಿನಿ ಬಸ್, ಟಾಟಾ ಸುಮೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Match Box Loaded Lorry Burnt At Vijayapura

ಅರ್ಧ ಗಂಟೆ ಲಾರಿ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಬಂದ ವಿಜಯಪುರ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A lorry loaded with match boxes accidentally caught fire in vijayapura,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X