ಪರಿಷತ್ ಚುನಾವಣೆ: ಎಂಬಿ ಪಾಟೀಲ್ ಸಹೋದರ ಸುನೀಲ್‌ಗೆ ಗೆಲುವು

ವಿಜಯಪುರ, ಸೆಪ್ಟೆಂಬರ್ 10: ವಿಜಯಪುರ-ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯಲ್ಲಿ ಮಾಜಿ ಸಚಿವ ಎಂಬಿ ಪಾಟೀಲ್ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.

ಈ ಕ್ಷೇತ್ರಕ್ಕೆ ಸೆಪ್ಟೆಂಬರ್ 6ರಂದು ಚುನಾವಣೆ ನಡೆದಿತ್ತು, ಸುನೀಲ್ ಗೌಡ ಅವರು ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು, ಅವರು ಬಿಜೆಪಿ ಅಭ್ಯರ್ಥಿ ಗೂಳಪ್ಪ ಶೆಟಗಾರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಒಟ್ಟು 38 ಮತಗಟ್ಟೆ ಕೇಂದ್ರದಲ್ಲಿ ಮತದಾನ ನಡೆದಿದ್ದು ಶೇ.99.07ರಷ್ಟು ಮತದಾನ ನಡೆದಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಂದ ತೆರವಾದ ಸ್ಥಾನಕ್ಕೆ ನಡೆದ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಉಭಯ ಜಿಲ್ಲೆಯ ಒಟ್ಟು 8187ಮತದಾರರ ಪೈಕಿ 8111 ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಿದ್ದರು. ಒಟ್ಟು 3999 ಪುರುಷ ಮತದಾರರ ಪೈಕಿ 3940 ಮತದಾರರು ಮತ ಚಲಾಯಿಸಿದ್ದಾರೆ ಇನ್ನು 4188 ಮಹಿಳಾ ಮತದಾರರ ಪೈಕಿ 1171 ಮಹಿಳೆಯರು ಮತ ಚಲಾಯಿಸಿದ್ದರು.

MB Patil brother won from Vijayapura-bagalkot MLC seat

ಇದರೊಂದಿಗೆ ಒಟ್ಟು ಶೇ.99.07ರಷ್ಟು ಮತದಾನವಾಗಿತ್ತು. 59 ಪುರುಷ ಮತದಾರರು ಹಾಗೂ 17 ಮಹಿಳಾ ಮತದಾರರು ಸೇರಿ ಒಟ್ಟು 76 ಮತದಾರರು ತಮ್ಮ ಹಕ್ಕು ಚಲಾಯಿಸಿಲ್ಲ, ಇದೀಗ ಫಲಿತಾಂಶ ಹೊರಬಿದ್ದಿದ್ದು ಸುನೀಲ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಸುನಿಲ್ ಗೌಡ ಬಿ.ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ ಮತ್ತು ಮಲ್ಲಿಕಾರ್ಜುನ ಲೋಣಿ ಅವರ ನಡುವೆ ಪ್ರಬಲ ಪೈಪೋಟಿ ನಡೆದಿತ್ತು. ಸಿ.ಎಸ್.ನಾಡಗೌಡ ಅವರ ಹೆಸರು ಬಲವಾಗಿ ಕೇಳಿ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+