Earthquake: ಗುಮ್ಮಟ ನಗರಿ ವಿಜಯಪುರದಲ್ಲಿ ಗಢಗಢ ನಡುಗಿದ ಭೂಮಿ: ಬೆಚ್ಚಿದ ಜನ
Earthquake: ಗುಮ್ಮಟ ನಗರಿ ವಿಜಯಪುರದಲ್ಲಿ ಆಗಾಗ ಭೂಕಂಪಿಸುತ್ತಲಿರುತ್ತದೆ. ಹಾಗೆಯೇ ಇದೀಗ ಇಂದು (ನವೆಂಬರ್ 4) ಮತ್ತೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ತಿಳಿಸಿದೆ. ಇನ್ನೂ ಭೂಮಿ ಗಢಗಢ ನಡುಗುತ್ತಿದ್ದಂತೆ ಇಲ್ಲಿನ ಜನರು ಬೆಚ್ಚಿಬಿದ್ದಿದ್ದಾರೆ.
ಇಂದು ಬೆಳಗ್ಗೆ ಸುಮಾರು 7.49ಕ್ಕೆ ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ವಿಜಯಪುರ ತಾಲ್ಲೂಕಿನ ಭೂತ್ನಾಳ್ ತಾಂಡಾದಿಂದ ವಾಯುವ್ಯಕ್ಕೆ ಸುಮಾರು 3.6 ಕಿಲೋ ಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆ ಆಗಿದೆ ಎಂದು ತಿಳಿದುಬಂದಿದೆ.

ಲಘು ಭೂಕಂಪನ ಆಗಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪನದ ತೀವ್ರತೆ ಕಡಿಮೆ ಆಗಿದ್ದು, ಭೂಕಂಪದ ಕೇಂದ್ರಬಿಂದುವಿನಿಂದ 50-60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.
ಇನ್ನೂ ಈ ರೀತಿ ಲಘು ಭೂಕಂಪನದಿಂದ ಯಾವುದೇ ರೀತಿಯ ಹಾನಿ ಉಂಟಾಗುವುದಿಲ್ಲ. ಆದರೂ, ಸ್ಥಳೀಯವಾಗಿ ಕಂಪನದ ಅನುಭವ ಆಗಿದೆ. ಆದ್ದರಿಂದ ಜನರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಅದು ಹೇಳಿದೆ. ವಿಜಯಪುರ ಜಿಲ್ಲೆಯಲ್ಲಿ ಹೀಗೆ ಭೂಕಂಪನ ಆಗಿರುವುದು ಇದೇ ಮೊದಲೇನಲ್ಲ. ವಿಜಯಪುರ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ಈ ಹಿಂದೆಯೂ ಸಹ ಭೂಮಿ ಕಂಪಿಸಿ ಜನರು ಬೆಚ್ಚಿಬಿದ್ದ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಸದ್ಯ ಈ ಲಘು ಭೂಕಂಪನದಿಂದ ಯಾವುದೇ ಹಾನಿಯಾಗಿಲ್ಲ ಎನ್ನುವ ಮಾಹಿತಿ ತಿಳಿದುಬಂದಿದೆ.












Click it and Unblock the Notifications