ವಿಜಯಪುರ ಜಿಲ್ಲೆಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಚಿವ ಎಂ.ಬಿ ಪಾಟೀಲ್
ವಿಜಯಪುರ: ವಿಜಯಪುರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಹಾಗೂ ವಿಜಯಪುರ ಶಾಸಕ ಎಂ.ಬಿ. ಪಾಟೀಲ್ ಅವರು ಕೆಲವೊಂದು ಪ್ರಮುಖ ವಿಷಯಗಳನ್ನು ಪ್ರಕಟಿಸಿದ್ದಾರೆ. ಕರ್ನಾಟಕದ ಕೈಗಾರಿಕೆಗೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಅವರು ಇದೀಗ ವಿಜಯಪುರದ ಅಭಿವೃದ್ಧಿಗೆ ಸಂಬಂಧಿಸಿದಂತೆಯೂ ಕೆಲವೊಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.
ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದ್ದು, ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ ನಿರ್ದಿಷ್ಟ ನಿರ್ದೇಶನಗಳನ್ನು ನೀಡಿರುವುದಾಗಿ ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದೆ. ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

1. ವಿಜಯಪುರ ಜಿಲ್ಲೆಯ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಸಬೂಬು ನೀಡದೆ ಪ್ರಗತಿ ಸಾಧಿಸಿ ವರದಿ ನೀಡಬೇಕು ಎಂದು ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಸೂಚನೆ.
2. ವಿಜಯಪುರ ನಗರದಲ್ಲಿ 60 ಬಾವಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಪ್ರಸ್ತುತ ಕೇವಲ 26 ಬಾವಡಿಗಳ ನೀರನ್ನಷ್ಟೇ ಗೃಹ ಬಳಕೆಗೆ ಪೂರೈಸಲಾಗುತ್ತಿದ್ದು, ಎಲ್ಲಾ 60 ಬಾವಡಿಗಳನ್ನೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು.
3. ಜಿಲ್ಲೆಯಲ್ಲಿ ಅಮೃತ-2 ಯೋಜನೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ನೀರು ಪೂರೈಸಬೇಕು.
4. ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಬೇಕು.
5. ಫಸಲ್ ಭೀಮಾ ಯೋಜನೆ ಸೇರಿದಂತೆ ಬೆಳೆ ವಿಮೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು.
6. ಅಭಿವೃದ್ಧಿ ಯೋಜನೆಗಳಿಗೆ ಸ್ಪಷ್ಟ ಕಾಲಮಿತಿ ನಿಗದಿಪಡಿಸಿ, ವಿಳಂಬಕ್ಕೆ ಅವಕಾಶ ನೀಡಬಾರದು.
7. ಮೂಲಭೂತ ಸೌಲಭ್ಯ ಕೊರತೆ ಇರುವ ಎಪಿಎಂಸಿಗಳಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು.
8. ಬಬಲೇಶ್ವರ, ತಿಕೋಟಾ ಹಾಗೂ ದೇವರಹಿಪ್ಪರಗಿ ಪ್ರದೇಶಗಳಲ್ಲಿ ಉಪಮಾರುಕಟ್ಟೆಗಳನ್ನು ಸ್ಥಾಪಿಸಬೇಕು.
9. ಭೂ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡಬೇಕು ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ಸ್ಪಷ್ಟ ದಿಕ್ಕು ಹಾಗೂ ಬದ್ಧತೆ ತೋರಬೇಕು.
10. ಪ್ರತಿ ಕ್ಷೇತ್ರದಲ್ಲಿಯೂ ಸರ್ಕಾರಿ ಗೋಶಾಲೆ ಸ್ಥಾಪನೆಗೆ ಕ್ರಮ ವಹಿಸಬೇಕು ಹಾಗೂ ಸಾವಯವ ಕೃಷಿ ಹಾಗೂ ನ್ಯಾನೋ ಗೊಬ್ಬರ ಬಳಕೆಗೆ ರೈತರಿಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ಸೇರಿದಂತೆ ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಿರುವುದಾಗಿ ಸಚಿವ ಎಂ. ಬಿ ಪಾಟೀಲ್ ಅವರು ಹೇಳಿದ್ದಾರೆ.
ಸಾರವಾಡ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಇನ್ನು ಬಬಲೇಶ್ವರ ಮತ ಕ್ಷೇತ್ರದ ಸಾರವಾಡ ಗ್ರಾಮದಲ್ಲಿ ವಿವಿಧ ಇಲಾಖೆಯಡಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ನೂತನ ಯೋಜನೆಗಳ ಭೂಮಿಪೂಜೆಯನ್ನು ಸಹ ಸಚಿವ ಎಂ.ಬಿ ಪಾಟೀಲ್ ನೆರವೇರಿಸಿದ್ದಾರೆ. ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕಾಮಗಾರಿಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಅವರು ಹೇಳಿದ್ದಾರೆ.
1. ಲೋಕೋಪಯೋಗಿ ಇಲಾಖೆಯ ಸುಮಾರು ರೂ. 10 ಕೋಟಿ ಅನುದಾನದಲ್ಲಿ ಸಾರವಾಡ - ಬಬಲೇಶ್ವರ ರಸ್ತೆಯ ಹಲಗಣಿ ಕ್ರಾಸ್ ವರೆಗೆ ರಸ್ತೆ ಸುಧಾರಣಾ ಕಾಮಗಾರಿ.
2. ಲೋಕೋಪಯೋಗಿ ಇಲಾಖೆಯ ರೂ.5 ಕೋಟಿ ಅನುದಾನದಲ್ಲಿ ಸಾರವಾಡ - ದದಾಮಟ್ಟಿ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ
3. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ರೂ. 2 ಕೋಟಿ ಅನುದಾನದಲ್ಲಿ ಸಾರವಾಡ - ತೊನಶ್ಯಾಳ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ
4. 2 ಕೋಟಿ ರೂಪಾಯಿ ವೆಚ್ಚದಲ್ಲಿ ಡೋಣಿ ನದಿ ಹೂಳೆತ್ತುವುದಕ್ಕೆ ಚಾಲನೆ ನೀಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications