Basanagouda Yatnal: ಯತ್ನಾಳ್ ವಿರುದ್ಧ ಕ್ರಮ ಇಲ್ಲ: ಬಿಜೆಪಿ ಹೈಕಮಾಂಡ್ ಹಿಂದೇಟಿಗೆ ಇದೇ ಕಾರಣ!
Basanagouda Yatnal: ಬಿಜೆಪಿ ಪ್ರಭಾವಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜಿಪಿ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಹೈಕಮಾಂಡ್ ವಿರುದ್ಧ ಹೇಳಿಕೆಗಳನ್ನು ಕೊಡುತ್ತಿದ್ದರೂ ಅವರ ಮೇಲೆ ಯಾವ ಕಾರಣಕ್ಕೆ ಕ್ರಮ ಆಗಿಲ್ಲ ಎನ್ನುವುದು ಇದೀಗ ಬಹಿರಂಗವಾಗಿದೆ. ಹೌದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದರೂ ಅವರ ಮೇಲೆ ಕ್ರಮ ಆಗಿಲ್ಲ. ಇಷ್ಟೆಲ್ಲ ವಿವಾದಾತ್ಮಕ ಹಾಗೂ ಪಕ್ಷ ವಿರೋಧ ಹೇಳಿಕೆಯನ್ನು ಕೊಟ್ಟರೂ ಯತ್ನಾಳ್ ಅವರ ಮೇಲೆ ಯಾವ ಕಾರಣಕ್ಕೆ ಕ್ರಮ ಆಗಿಲ್ಲ ಎನ್ನುವ ರಹಸ್ಯ ಇದೀಗ ಬಹಿರಂಗವಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಆಯ್ಕೆಯಾದಾಗಿನಿಂದಲೂ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧವೂ ಅವರು ಗುಡುಗಿರುವುದು ಇದೆ. ಇದೀಗ ಅವರ ವಿರುದ್ಧ ಯಾವ ಕಾರಣಕ್ಕೆ ಕ್ರಮ ತೆಗೆದುಕೊಳ್ಳಲಾಗಿಲ್ಲ ಎನ್ನುವ ಅಚ್ಚರಿಯ ಕಾರಣ ಬಹಿರಂಗವಾಗಿದೆ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಂಡರೆ ಪ್ರಾದೇಶಿಕ ಪಕ್ಷವನ್ನು ರಚನೆ ಮಾಡುವುದಾಗಿ ಅವರು ಹೇಳಿದ್ದರಿಂದಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ.

ಯಾವುದೇ ಕಾರಣಕ್ಕೂ ಬಿ.ವೈ.ವಿಜಯೇಂದ್ರ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಆಗಲ್ಲ. ಒಂದೊಮ್ಮೆ ಪಕ್ಷ ಉಚ್ಚಾಟನೆ ಮಾಡಿದರೆ ಸಹ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ನನಗೆ ರಾಜಕೀಯವಾಗಿ ಹಲವು ಆಯ್ಕೆಗಳು ಇವೆ. ಹಿಂದುತ್ವ ಸಿದ್ಧಾಂತವನ್ನಾಗಿರಿಸಿಕೊಂಡು ಪ್ರಾದೇಶಿಕ ಪಕ್ಷ ಕಟ್ಟಲು ಅವಕಾಶ ಇದೆ. ಸ್ವಂತ ಅಥವಾ ಪ್ರಾದೇಶಿಕ ಪಕ್ಷವನ್ನು ಪ್ರಾರಂಭಿಸಿದರೆ 60ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿಯೂ ಅವರು ಹೇಳಿದ್ದರು ಎನ್ನಲಾಗಿದ್ದು. ಇದನ್ನು ಮುಕುಂದ ಅವರು ಬಿಜೆಪಿ ಹೈಕಮಾಂಡ್‌ಗೆ ಹೇಳಿದ್ದರು ಎನ್ನಲಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.
ನೋಟಿಸ್ ನೀಡಿದ ಬೆನ್ನಲ್ಲೇ ಸಭೆ: ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ನೋಟಿಸ್ ಬಂದ ಮೇಲೆ ಈ ಸಂಬಂಧ ಚರ್ಚೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಮೊರೆ: ಇನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬದಲಾಯಿಸುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಸಹ ಸಂಪರ್ಕಿಸಿದ್ದರು ಎಂದು ಹೇಳಲಾಗಿದೆ. ದೇವೇಂದ್ರ ಫಡ್ನವಿಸ್ ಅವರ ಮೂಲಕ ಬಿಜೆಪಿ ಹೈಕಮಾಂಡ್‌ನ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಲಾಗಿದೆ ಎಂದೂ ಹೇಳಲಾಗಿದೆ. ಇನ್ನು ಹೈಕಮಾಂಡ್‌ನ ಖಡಕ್ ಸೂಚನೆಯ ಹಿನ್ನೆಲೆಯಲ್ಲಿ ಯತ್ನಾಳ್ ಅವರ ಬಣ ಈಗ ತುಸು ಸೈಲೆಂಟ್ ಆಗಿದೆ ಎನ್ನಲಾಗಿದೆ.












Click it and Unblock the Notifications