'ಅಸೆಂಬ್ಲಿ ಟಿಕೆಟ್ ಗಾಗಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿಲ್ಲ'

Posted By: ನಮ್ಮ ಪ್ರತಿನಿಧಿ
Subscribe to Oneindia Kannada

ವಿಜಯಪುರ, ಅಕ್ಟೋಬರ್ 23: 'ಪ್ರಜ್ವಲ್ ರೇವಣ್ಣ ಯಾವ ಕ್ಷೇತ್ರದಲ್ಲಿ ಸ್ಫರ್ಧಿಸುತ್ತಾರೆ ಎಂಬುದು ನಿಗದಿಯಾಗಿಲ್ಲ. ಟಿಕೆಟ್ ಗಾಗಿ ಪ್ರಜ್ವಲ ರೇವಣ್ಣ ಇದುವರೆಗೆ ಅರ್ಜಿ ಸಲ್ಲಿಸಿಲ್ಲ' ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಹೇಳಿದ್ದಾರೆ.

'ಪ್ರಜ್ವಲ್ ಅವರು ಅರ್ಜಿ ಸಲ್ಲಿಸಿದರೆ ಆ ಬಗ್ಗೆ ಜೆಡಿಎಸ್ ಸಂಸದಿಯ ಮಂಡಳಿಯಲ್ಲಿ‌ ಚರ್ಚೆ ನಡೆಸಲಾಗುವುದು, ಆ ಬಳಿಕ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವ ಬಗ್ಗೆ ವರಿಷ್ಠರಾದ ಎಚ್ ಡಿ ದೇವೇಗೌಡ ಅವರು ನಿರ್ಧರಿಸುತ್ತಾರೆ' ಎಂದು ಬಂಡೆಪ್ಪ ಕಾಶಂಪುರ ಹೇಳಿದರು.

ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕು : ಮಹಾದಾಯಿ, ಕಾವೇರಿ ವಿಚಾರದಲ್ಲಿ ದೇವೇಗೌಡರು ನಿರಂತರ ಹೋರಾಟ ಮಾಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ಆದ್ಯತೆ ಬಡತನ ನಿವಾರಣೆ, 5 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಎಂದರು.

Prajwal Revanna is yet to apply for Assembly Ticket : Bandeppa Kashempur

ಕುಮಾರಸ್ವಾಮಿ ಇಸ್ರೇಲ್‌ನಲ್ಲಿ ಕೃಷಿ ಬಗ್ಗೆ ಅಧ್ಯಯನ ಮಾಡಿದ್ದಾರೆ. ಜೆಡಿಎಸ್ ಅಧಿಕಾರಿಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 25 ಸಾವಿರ ಮನ್ನಾ ಮಾಡಿದ್ದರು. ಆತ್ಮಹತ್ಯೆ ಮಾಡಿಕೊಂಡ ರೈತರಿಗಾಗಿ ಈಗಿನ ಸರ್ಕಾರ ಯಾವುದೇ ಕಾರ್ಯಕ್ರಮವನ್ನ ಜಾರಿಗೆ ತಂದಿಲ್ಲ ಎಂದರು.

ರಾಜ್ಯ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ, ನೀರಾವರಿ ಸಚಿವ ಎಂಬಿ ಪಾಟೀಲ್ ಕೇವಲ ತಮ್ಮ ಜಿಲ್ಲೆಗೆ ಮಾತ್ರ ಸೀಮಿತರಾಗಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಎಂಬಿ‌ ಪಾಟೀಲ್ ಒಂದೇ ಒಂದು ಕೆರೆ ತುಂಬಿಸಿಲ್ಲ ಎಂದು ಆರೋಪಿಸಿದರು.

ಕರ್ನಾಟದಲ್ಲಿ ಮೊದಲ ಬಾರಿಗೆ ಜೆಡಿಎಸ್ ಟಿಪ್ಪು ಜಯಂತಿಯನ್ನು ಆಚರಣೆ ಮಾಡಿದೆ. ಜೆಡಿಎಸ್ ಕಚೇರಿಯಲ್ಲಿ ಬಹಳ ವರ್ಷಗಳಿಂದ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ ಎಂದು ಹೇಳಿದರು.ಈ ಹಿಂದೆ ಬಿಎಸ್ವೈ ಕೆಜೆಪಿ ಕಟ್ಟಿದಾಗ ಟಿಪ್ಪು ಜಯಂತಿ ಆಚರಿಸಿದ್ದರು, ಈಗ ಅವರೇ ವಿರೋಧಿಸುತ್ತಿರುವುದು ವಿಪರ್ಯಾಸ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prajwal Revanna is yet to apply for Assembly Ticket, JDS supremo HD Deve Gowda will decide on it said senior leader Bandeppa Kashempur

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ