ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ: ಸಾಮೂಹಿಕ ಅತ್ಯಾಚಾರ ಖಂಡಿಸಿ ಮುಂದುವರೆದ ಪ್ರತಿಭಟನೆ

By ವಿಜಯಪುರ ಪ್ರತಿನಿಧಿ
|
Google Oneindia Kannada News

ವಿಜಯಪುರ, ಡಿಸೆಂಬರ್ 26: ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವಿಜಯಪುರ ಜಿಲ್ಲೆಯ ಜನರಲ್ಲಿ ಭಾರಿ ಆಕ್ರೋಶ ಹುಟ್ಟಿಸಿದೆ, ಘಟನೆ ನಡೆದು ವಾರಕ್ಕೂ ಹೆಚ್ಚು ಸಮಯವಾದರೂ ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಕಡಿಮೆಯಾಗಿಲ್ಲ.

ವಿಜಯಪುರ: ಸಾಮೂಹಿಕ ಅತ್ಯಾಚಾರ, ಕೊಲೆ ಖಂಡಿಸಿ ಜಿಲ್ಲಾ ಬಂದ್ವಿಜಯಪುರ: ಸಾಮೂಹಿಕ ಅತ್ಯಾಚಾರ, ಕೊಲೆ ಖಂಡಿಸಿ ಜಿಲ್ಲಾ ಬಂದ್

ಇಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಇಂಡಿ, ತಾಂಬಾ, ಮುದ್ದೇಬಿಹಾಳ ಮುಂತಾದ ಕಡೆಗಳಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದೆ, ಕನ್ನಡ ಪರ ಸಂಘಟನೆಗಳು, ದಲಿತಪರ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ.

Protests continued in Vijayapura opposing gang rape and murdering a minor girl

ಬೆಳಿಗ್ಗೆಯಿಂದಲೇ ಸಾರ್ವಜನಿಕರು, ವಿವಿಧ ಸಂಘಟನೆಗಳ ಸದಸ್ಯರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ, ಬಸ್ ನಿಲ್ದಾಣ, ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಬಂದ್ ನಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದೆ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದು, ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಸ್ಥಳೀಯ ಅಧಿಕಾರಿಗಳಿಗೆ ಈ ಕುರಿತು ಮನವಿ ಸಲ್ಲಿಸಲಿದ್ದಾರೆ.

English summary
vijayapura's some talluks call for bandh in protest of gang rape and murder of minor girl several days before in Vijayapura city. Dalith and Kannada associations gave supports to bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X