Get Updates
Get notified of breaking news, exclusive insights, and must-see stories!

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ

ವಿಜಯಪುರ, ಮಾರ್ಚ್‌ 12: ಜಗತ್ತಿಗೆ ಸಮಾನತೆ ಮತ್ತು ಕಾಯಕದ ಮೌಲ್ಯಗಳನ್ನು ಸಾರಿದ ವಿಶ್ವಗುರು ಬಸವಣ್ಣ ಹಾಗೂ ಶಿವಶರಣೆ ಅಕ್ಕಮಹಾದೇವಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಭಾರೀ ಆಕ್ರೀಶಕ್ಕೆ ಕಾರಣವಾಗಿದೆ.

ರಮಾಕಾಂತ ಎಂಬಾತ ತನ್ನ ಫೇಸ್‌ಬುಕ್ ಖಾತೆಯ ಮೂಲಕ ಸಮಾಜದ ಆರಾಧ್ಯ ದೈವಗಳಾದ ಬಸವಣ್ಣ ಮತ್ತು ಅಕ್ಕಮಹಾದೇವಿ ಅವರ ಕುರಿತು ಅತ್ಯಂತ ಕೀಳುಮಟ್ಟದ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದಾನೆ. ಬಸವಣ್ಣನವರ ಬಗ್ಗೆ ಆಧಾರರಹಿತ ಮತ್ತು ನಿಂದನಾತ್ಮಕ ಹೇಳಿಕೆಗಳನ್ನು ನೀಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾನೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ರಾಜ್ಯದಾದ್ಯಂತ ಶರಣರ ಅನುಯಾಯಿಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ.

Protests Erupt in Vijayapura Over Objectionable Social Media Post on Basavanna and Akka Mahadevi

ಅಶ್ಲೀಲ ಪದ ಬಳಕೆಯ ಪೋಸ್ಟ್ ವಿರುದ್ಧ ಆಕ್ರೋಶ

ಶರಣರ ಅನುಯಾಯಿಗಳು ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಸವಣ್ಣ ಹಾಗೂ ಅಕ್ಕಮಹಾದೇವಿ ಅವರ ಕುರಿತು ನಿಂದನಾತ್ಮಕ ಹಾಗೂ ಅಶ್ಲೀಲ ಶಬ್ದಗಳ ಬಳಕೆ ಮಾಡಿ ಪೋಸ್ಟ್ ಹಂಚಿಕೊಂಡಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿ ಬಸವಾದಿ ಶರಣರ ಅನುಯಾಯಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ರಮಾಕಾಂತ ಎಂಬ ವ್ಯಕ್ತಿ ಉದ್ದೇಶಪೂರ್ವಕವಾಗಿ ಸಾಮಾಜಿಕ ಶಾಂತಿ ಕದಡಲು ಮತ್ತು ಜನರ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡಲು ಇಂತಹ ವಿಕೃತ ಕೃತ್ಯ ಎಸಗಿದ್ದಾನೆ. ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಅಂತಲೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಆರೋಪಿಯನ್ನ ಬಂಧಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಪ್ರತಿಭಟನಾಕಾರರು, "ಬಸವಣ್ಣನವರು ನಾಡಿನ ಸಾಂಸ್ಕೃತಿಕ ಗುರು. ಅವರ ಚಾರಿತ್ರ್ಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿರುವುದು ಖಂಡನೀಯ. ಆರೋಪಿಯನ್ನು ಕೂಡಲೇ ಬಂಧಿಸಿ, ಸೈಬರ್ ಕ್ರೈಂ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಆರೋಪಿಯನ್ನು ಬಂಧಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು," ಎಂದು ಎಚ್ಚರಿಕೆ ನೀಡಿದ್ದಾರೆ.

'ಕಠಿಣ ಶಿಕ್ಷೆ ಆಗಬೇಕು'

ಘಟನೆಯ ಗಂಭೀರತೆಯನ್ನು ಅರಿತ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಮುಂದಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ಇದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ. ಸಮಾಜದಲ್ಲಿ ಸೌಹಾರ್ದತೆ ಕೆಡಿಸುವ ಇಂತಹ ವಿಕೃತ ಮನಸ್ಥಿತಿಯ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂಬುದು ಶರಣರ ಅನುಯಾಯಿಗಳ ಒತ್ತಾಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+