ಉತ್ತರ ಕರ್ನಾಟಕ ಭಾಗದಲ್ಲಿ ಸರಣಿ ಬೆಂಕಿ ಅವಘಡ!
ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಭಾರೀ ಬೆಂಕಿ ಅವಘಡಗಳು ಸಂಭವಿಸಿವೆ. ಈ ಮೂರು ಜಿಲ್ಲೆಗಳು ಭಾನುವಾರ ಹಾಗೂ ಸೋಮವಾರ ಭಾರೀ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿವೆ. ಈ ಭಾಗದಲ್ಲಿ ವಾಹನಗಳಿಗೆ ಬೆಂಕಿ ಹಾಗೂ ಸಿಲಿಂಡರ್ ಸ್ಫೋಟ ಸಂಭವಿಸಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮೂರು ಜಿಲ್ಲೆಗಳಲ್ಲಿ ಸಂಭವಿಸಿದ ಬೆಂಕಿ ಅವಘಡದ ಮಾಹಿತಿ ಇಲ್ಲಿದೆ.
ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾನುವಾರದಿಂದ ಬೆಂಕಿ ಅವಘಡ ಮುಂದುವರಿದಿವೆ. ಹಾವೇರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಜಯಪುರ ಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು. 15 ವಾಹನಗಳು ಸುಟ್ಟು ಕರಕಲಾಗಿವೆ. ಇಲ್ಲಿನ ಗಾಂಧಿಚೌಕ್ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಭಾರೀ ಬೆಂಕಿಯನ್ನು ನಂದಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ರಾಜ್ಯದ ದಕ್ಷಿಣ ಭಾಗದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಆದರೆ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಬಿಸಿಲು ಇದೆ. ಈ ರೀತಿ ಬಿಸಿಲು ಇರುವಾಗಲೇ ಸರಣಿ ಬೆಂಕಿ ಅವಘಡಗಳು ಈ ಭಾಗದಲ್ಲಿ ಸಂಭವಿಸಿವೆ. ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಹಾಗೂ ವಶಪಡಿಸಿಕೊಳ್ಳಲಾಗಿದ್ದ ವಾಹನಗಳು ಬೆಂಕಿಗಾಹುತಿ ಆಗಿವೆ.
ಬಿಸಿಲಿನ ಝಳದಲ್ಲೇ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು 15ಕ್ಕೂ ಹೆಚ್ಚು ವಾಹನಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಇನ್ನು ಬೆಂಕಿ ಅವಘಡದ ಸಂದರ್ಭದಲ್ಲಿ ಟೈರ್‌ಗಳು ಸ್ಫೋಟಗೊಂಡಿವೆ. ಬೆಂಕಿ ಸುತ್ತಮುತ್ತಲಿನ ಪ್ರದೇಶಕ್ಕೂ ಅವರಿಸಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.
ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಫೋಟ: ಇನ್ನು ಬಾಗಲಕೋಟೆಯಲ್ಲಿ ಸೋಮವಾರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಇಲ್ಲಿನ ಬನಹಟ್ಟಿಯ ಪೊಲೀಸ್ ಕ್ವಾಟರ್ಸ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಬಾಗಲಕೋಟೆಯ ಬನಹಟ್ಟಿಯ ಹೆಡ್ ಕಾನ್ಸ್ಟೇಬಲ್ ರವೀಂದ್ರ ದಳವಾಯಿ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟ ತೀವ್ರವಾಗಿತ್ತು. ಬೆಂಕಿಯಿಂದ ಭಾರೀ ಹಾನಿ ಸಂಭವಿಸಿದೆ. ಸಿಲಿಂಡರ್ ಸ್ಫೋಟದಿಂದ ರವೀಂದ್ರ ದಳವಾಯಿ ಅವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ಶಬ್ದವನ್ನು ಕೇಳಿ ಅಕ್ಕಪಕ್ಕದ ಮನೆಯ ಜನ ಬೆಚ್ಚಿ ಬಿದ್ದಿದ್ದಾರೆ. ಸಿಲಿಂಡರ್ ಸ್ಫೋಟಗೊಂಡ ಸಂದರ್ಭದಲ್ಲಿ ಬೆಂಕಿ ತೀವ್ರವಾಗಿತ್ತು.
ಸಿಲಿಂಡರ್ ಸ್ಫೋಟದಿಂದಾಗಿ ಮನೆಯಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗ್ಯಾಸ್ ಲೀಕ್‌ನಿಂದ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸಲು ಹರಸಾಹಸಪಟ್ಟರು.
ಹಾವೇರಿಯಲ್ಲೂ ಬೆಂಕಿ ಅವಘಡ: ಹಾವೇರಿಯಲ್ಲೂ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಮುಖ್ಯ ಬಸ್‌ನಿಲ್ದಾಣಕ್ಕೆ ಹೊಂದಿಕೊಂಡಿರುವ ಕಟ್ಟಡಗಳಿಗೆ ಭಾನುವಾರ ಬೆಂಕಿ ತಗುಲಿದೆ. ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.












Click it and Unblock the Notifications