ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಧಾನಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರು, ಈಶ್ವರಪ್ಪ ಗರಂ

By ನಮ್ಮ ಪ್ರತಿನಿಧಿ
|
Google Oneindia Kannada News

ವಿಜಯಪುರ, ಅಕ್ಟೋಬರ್ 29: ಪ್ರಧಾನಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗದಿರುವುದು ತಪ್ಪು. ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಆಟವನ್ನು ಜನರು ನೋಡಿರುತ್ತಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.

In Pics : ಮೋದಿ ಸ್ವಾಗತಕ್ಕೆ ಸಿಂಗಾರಗೊಂಡ ಧರ್ಮಸ್ಥಳ

ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ ಅನ್ನೋದು ಪ್ರಜಾಪ್ರಭುತ್ವ ವಿರೋಧಿ. ಸಿದ್ದರಾಮಯ್ಯನವರ ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಧಾನಿ ಕಾರ್ಯಕ್ರಮಕ್ಕೆ ಹೋಗಿ ರಾಜ್ಯದ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಬೇಕು. ಈ ವಿಚಾರದಲ್ಲಿ ಸಿಎಂ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಈಶ್ವರಪ್ಪ ಹೇಳಿದರು.

Minister MB Patil is diving religion : BJP leader KS Eshwarappa

ಎಂಬಿ ಪಾಟೀಲ್ ಅವರು ತಮ್ಮ ನೀರಾವರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಎಂಬಿ ಪಾಟೀಲ್ ಅವರು ಜನರ ಕಷ್ಟಕ್ಕೆ ಸ್ಪಂದಿಸೋದು ಬಿಟ್ಟು ಧರ್ಮ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮಗಳನ್ನು ಒಡೆಯುವ ಕೆಲಸಗಳನ್ನೇ ಮುಂದುವರೆಸಲಿ ಎಂದು ಕಿಡಿಕಾರಿದರು.

Live : ನರೇಂದ್ರ ಮೋದಿ ಸ್ವಾಗತಿಸಿದ ವೀರೇಂದ್ರ ಹೆಗ್ಗಡೆLive : ನರೇಂದ್ರ ಮೋದಿ ಸ್ವಾಗತಿಸಿದ ವೀರೇಂದ್ರ ಹೆಗ್ಗಡೆ

ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಅಮೀತ್ ಶಾ ಈ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಹಾಗೂ ಅನಂತ ಕುಮಾರ್ ಹೆಗಡೆ ಸಿಎಂ ಅಭ್ಯರ್ಥಿ ಅಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ. ಸಚಿವರು ಹಾಗೂ ಅಧಿಕಾರಿಗಳನ್ನು ರಕ್ಷಣೆ ಮಾಡಲು ಎಸಿಬಿ ರಚನೆ ಮಾಡಲಾಗಿದೆ. ವಿರೋಧಿಗಳ ವಿರುದ್ಧ ಕೇಸ್ ದಾಖಲಿಸಲು ಎಸಿಬಿ ರಚಿಸಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

English summary
Minister MB Patil is diving religion, let him resign and continue his work said BJP leader KS Eshwarappa in Vijayapura. CM Siddramaiah should attend PM Modi's event in Karnataka today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X