Siddheshwar Swami Health : ಕುಸಿಯುತ್ತಿರುವ ಸಿದ್ದೇಶ್ವರ ಶ್ರೀಗಳ ಉಸಿರಾಟ, ನಾಡಿಮಿಡಿತ: ಇಲ್ಲಿದೆ ಹೆಲ್ತ್‌ ಬುಲೆಟಿನ್‌

ವಿಜಯಪುರ, ಡಿಸೆಂಬರ್‌ 02: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬರುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈದ್ಯರು ಶ್ರೀಗಳ ಉಸಿರಾಟ ಹಾಗೂ ನಾಡಿಮಿಡಿತ ಕ್ಷಣಕ್ಷಣಕ್ಕೂ ಕುಸಿಯುತ್ತಿದೆ ಎಂದು ತಿಳಿಸಿದ್ದಾರೆ.

ಶ್ರೀಗಳು ಯಾವುದೇ ಆಹಾರವನ್ನು ಸೇವಿಸುತ್ತಿಲ್ಲ. ಇಂದು ಬೆಳಿಗ್ಗೆ ಗಂಜಿ ಸೇವಿಸಿದ್ದರು. ಆದರೆ, ಈಗ ಯಾವು ಆಹಾರವನ್ನೂ ಸೇವನೆ ಮಾಡುತ್ತಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Siddeshwar Sris breathing, pulse deteriorating Here is the health bulletin

ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ

ಇಂದು ವಿಜಯಪುರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದೇಶ್ವರ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, 'ವಿಜಯಪುರದಲ್ಲಿ ಇಂದು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದೆ. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ತಮ್ಮ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.

ವೈದ್ಯರ ತಂಡವು ಯೋಗಾಶ್ರಮದಲ್ಲಿಯೇ ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಿದೆ. ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಸೇರಿದಂತೆ ನಾಡಿನ ಹಲವಾರು ಸ್ವಾಮೀಜಿಗಳು ಶ್ರೀಗಳ ಆರೋಗ್ಯ ವಿಚಾರಿಸಲು ಆಗಮಿಸಿದ್ದಾರೆ.

Siddeshwar Sris breathing, pulse deteriorating Here is the health bulletin

ಶ್ರೀಗಳ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಅನೇಕ ಮುಖಂಡರು ಯೋಗಾಶ್ರಮಕ್ಕೆ ಭೇಡಿ ನೀಡಿದ್ದಾರೆ. ಇದೇ ವೇಳೆ, ಶ್ರೀಗಳ ಆರೋಗ್ಯವನ್ನು ಪ್ರಧಾನಿ ನರೇಂದ್ರ ವಿಚಾರಿಸಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಇದನ್ನು ಕೇಳಿದ ಸಿದ್ದೇಶ್ವರ ಶ್ರೀಗಳು ಕೈಮುಗಿದಿದ್ದಾರೆ.

ಸಿದ್ದೇಶ್ವರ ಶ್ರೀಗಳು ಶೀಘ್ರವೇ ಗುಣಮುಖರಾಗಿ ಹೊರಬರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದ್ದಾರೆ. ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿಯೂ ಅವರು ಭರವಸೆ ನೀಡಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಶ್ರೀಗಳ ಬೇಗನೇ ಗುಣಮುಖರಾಗಲಿ ಎಂದು ಭಕ್ತರು ಪ್ರಾರ್ಥಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+