ಸಿದ್ದೇಶ್ವರ ಶ್ರೀ ನಿಧನ; ಜ. 3ರಂದು ವಿಜಯಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ವಿಜಯಪುರ, ಜನವರಿ, 02: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (82) ಸೋಮವಾರ (ಜನವರಿ 02) ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಗ್ಗೆ 11ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳಿಗೆ ಜನವರಿ 03ರಂದು ಮಂಗಳವಾರ ರಜೆಯನ್ನು ಘೋಷಿಸಲಾಗಿದೆ.

ಶ್ರೀಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು ಎಂದು ಕಂಬನಿ ಮಿಡಿದಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಅಂತ್ಯಕ್ರಿಯೆ ಜರುಗಲಿದ್ದು, ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ದರ್ಶನದ ವ್ಯವಸ್ಥೆಯನ್ನು ಮಾಡಲಾಗಿದೆ. ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಚಿವ ಸಂಪುಟದ ಸದಸ್ಯರು ಸಹಿತ ವಿಜಯಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಶ್ರೀಗಳ ಅಂತಿಮ ದರ್ಶನ ಪಡೆಯುವುದಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ.

ಸಿದ್ದೇಶ್ವರ ಶ್ರೀಗಳು ನಡೆದುಬಂದ ಹಾದಿ

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24 ರಂದು ಜನಿಸಿದ್ದರು. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ 4 ನೇ ತರಗತಿವರೆಗೆ ಓದಿದ ನಂತರ ಅವರು ವೇದಾಂತ ಕೇಸರಿ ಎಂದೇ ಪ್ರಖ್ಯಾತರಾಗಿದ್ದ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳ ಅವರನ್ನು ಆಶ್ರಯಿಸಿದರು. ಇವರ ಚುರುಕುತನವನ್ನು ಗುರುತಿಸಿದ ಹಿರಿಯ ಶ್ರೀಗಳು ತಾವು ಪ್ರವಚನ ಮಾಡುವ ಸ್ಥಳಗಳಿಗೆ ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಶ್ರೀಗಳು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರು.

Siddeshwara Swamiji Death: Holiday Announced to Vijayapura District Schools and Colleges on Jan 3

ಶ್ರೀಗಳಗಳು ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದರು. ಶ್ರೀಗಳವರು ತಮಗೆ ಭಾರತ ಸರ್ಕಾರ ಘೋಷಿಸಿದ್ದ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ಅತ್ಯುನ್ನತ ಪ್ರಶಸ್ತಿಗಳನ್ನು ವಿನಯಪೂರ್ವಕವಾಗಿ ನಿರಾಕರಿಸಿದ್ದರು ಎಂಬುದು ಗಮನಾರ್ಹ ಸಂಗತಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+