ಪದ್ಮ ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದ ಸಿದ್ದೇಶ್ವರ ಶ್ರೀಗಳು
ವಿಜಯಪುರ ಜನವರಿ 2: ಖ್ಯಾತ ಪ್ರವಚನಕಾರರು, ನಡೆದಾಡುವ ದೇವರಂದೆ ಇಡೀ ವಿಶ್ವದಾದ್ಯಂತ ಪ್ರಖ್ಯಾತಿಗೆ ಕಾರಣರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಿಧಿವಶರಾಗಿದ್ದಾರೆ. ಕಳೆದ ಒಂದು ವಾರಕ್ಕಿಂತಲೂ ಹೆಚ್ಚು ದಿನದಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿರುವ ಸ್ವಾಮೀಜಿಗಳ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು, ಜನಪ್ರತಿನಿಧಿಗಳು, ಸಚಿವರು, ಶಾಸಕರುಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯಿಸಿರೆಳೆದಿದ್ದಾರೆ.
Paramapujya Sri Siddheshwara Swami Ji will be remembered for his outstanding service to society. He worked tirelessly for the betterment of others and was also respected for his scholarly zeal. In this hour of grief, my thoughts are with his countless devotees. Om Shanti. pic.twitter.com/DbWtdvROl1
— Narendra Modi (@narendramodi) January 2, 2023
2018ರಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಪದ್ಮಶ್ರೀ ಪುರಸ್ಕಾರವನ್ನು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಿನಯಪೂರ್ವಕವಾಗಿ ನಿರಾಕರಿಸಿದ್ದರು. ಈ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದ ಅವರು 'ನಾನೊಬ್ಬ ಸಾಮಾನ್ಯ, ಆಧ್ಯಾತ್ಮದೆಡೆಗೆ ಒಲವಿರುವ ವ್ಯಕ್ತಿ, ನನಗಿಂತ ಸಾಧನೆ ಮಾಡಿದ ಅನೇಕ ಸಾಧಕರಿದ್ದು ಅವರನ್ನು ಗುರುತಿಸಿ ಪುರಸ್ಕಾರ ನೀಡಿ, ನನಗೆ ಈ ಪ್ರಶಸ್ತಿಬೇಡ' ಎಂದು ತಮ್ಮ ನಿಲುವನ್ನು ಪತ್ರದಲ್ಲಿ ಸ್ಪಷ್ಟಪಡಿಸಿದ್ದರು. ಪತ್ರದಲ್ಲಿ ಶ್ರೀಗಳು, ದೇಶದ ಅತ್ಯುನ್ನತ ಗೌರವ ಪುರಸ್ಕಾರವಾದ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದಕ್ಕೆ ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ. ಆದರೆ, ನನಗೆ ಈ ಪುರಸ್ಕಾರ ಬೇಡ ಎಂದು ವಿನಯಪೂರ್ವಕವಾಗಿ ನಿರಾಕರಿಸಿದ್ದರು. ಈ ಹಿಂದೆ ಒಲಿದು ಬಂದಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಪ್ರಶಸ್ತಿಯನ್ನು ಶ್ರೀಗಳು ನಿರಾಕರಿಸಿದ್ದಾರೆ.
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಲಿಂಗೈಕ್ಯರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಾತ್ರಿ 10:15ರ ವೇಳೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, 6:05 ನಿಮಿಷಕ್ಕೆ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕರಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿ ವಿಧಾನಗಳನ್ನು ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ವಿಜಯಪುರದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ತಿಳಿಸಿದ್ದಾರೆ. ನಾಳೆ ಸಂಜೆ ಅಂತಿಮ ವಿಧಿವಿಧಾನ ನಡೆಯಲಿದ್ದು, ಈ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು. ಪ್ರಧಾನಿ ನರೇಂದ್ರ ಮೋದಿ ಕೂಡ ಶ್ರೀಗಳ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಮೊನ್ನೆಯಷ್ಟೇ ಸ್ವಾಮೀಜಿಗಳ ದರ್ಶನಕ್ಕೆ ಸಿಎಂ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಜಯಪುರಕ್ಕೆ ಭೇಟಿ ನೀಡಿ, ಶ್ರೀಗಳ ದರ್ಶನ ಪಡೆದುಕೊಂಡಿದ್ದರು.
ನಾಳೆ ನಸುಗಿನ ಜಾವ 5 ಗಂಟೆವರೆಗೂ ಆಶ್ರಮದ ಆವರಣದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಬೆಳಗ್ಗೆ 6 ರಿಂದ ಸಂಜೆ 3 ಗಂಟೆವರೆಗೂ ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 3 ಗಂಟೆಯಿಂದ 4 ಗಂಟೆವರೆಗೂ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಸಂಜೆ 5 ಗಂಟೆಗೆ ಅಂತಿಮ ಕಾರ್ಯಗಳು ಆಶ್ರಮದಲ್ಲೇ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಿದ್ದೇಶ್ವರ ಶ್ರೀಗಳು ರಚಿಸಿರುವ 20 ಸಾವಿರ ಪುಟಗಳ ಜ್ಞಾನಯೋಗ ಸಂಪುಟವನ್ನು ಗದುಗಿನ ಶ್ರೀಗಳಿಂದ ಪುಸ್ತಕ ಬಿಡುಗಡೆಗೊಳಿಸಲಾಗಿತ್ತು. ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾದ ಮಲ್ಲಿಕಾರ್ಜುನ ಶ್ರೀಗಳ ಕುರಿತಾಗಿ ಬರೆದಿರುವ ಪುಸ್ತಕ ಇದಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications