Breaking; ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ವಿಜಯಪುರ, ಜನವರಿ 02; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು. ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಹಲವಾರು ಗಣ್ಯರು ಭೇಟಿ ನೀಡುತ್ತಿದ್ದು, ಸಿದ್ದೇಶ್ವರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.

ಸೋಮವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಜಯಪುರಕ್ಕೆ ಭೇಟಿ ನೀಡಿದರು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ತಮ್ಮ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.

81 ವರ್ಷದ ಶ್ರೀ ಸಿದ್ದೇಶ್ವರ ಶ್ರೀಗಳ ಆರೋಗ್ಯ ಕಳೆದ ವಾರದಿಂದ ಏರುಪೇರಾಗಿದೆ. ವೈದ್ಯರ ತಂಡ ಜ್ಞಾನಯೋಗಾಶ್ರಮದಲ್ಲಿಯೇ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದೆ. ಸೋಮವಾರ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಮಠಕ್ಕೆ ನೂರಾರು ಭಕ್ತರು, ವಿವಿಧ ಗಣ್ಯರು ಆಗಮಿಸುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Siddheshwar Swamiji Health Siddaramaiah Visits Vijayapura

ಸಿದ್ದೇಶ್ವರ ಶ್ರೀಗಳಿಗೆ ವೈದ್ಯರಾದ ಡಾ. ಮೂಲಿಮನಿ, ಡಾ. ಎಸ್. ಬಿ. ಪಾಟೀಲ, ಡಾ. ಸೋಮಶೇಖರ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಸೋಮವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಹೆಲ್ತ್ ಬುಲೆಟಿನ್‌ನಲ್ಲಿ ಸಿದ್ದೇಶ್ವರ ಶ್ರೀಗಳ ನಾಡಿಮಿಡಿತ ಕ್ಷಣ ಕ್ಷಣಕ್ಕೆ ಕಡಿಮೆಯಾಗ ತೊಡಗಿದೆ. ಆಕ್ಸಿಜನ್ ಸಹಾಯದಿಂದ ಉಸಿರಾಟ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಶ್ರೀಗಳು ಬೆಳಗ್ಗೆ ಗಂಜಿ ಸೇವಿಸಿದ್ದರು, ಬಳಿಕ ಇದುವರೆಗೂ ಏನನ್ನೂ ಸೇವಿಸಿಲ್ಲ ಎಂದು ತಿಳಿಸಲಾಗಿದೆ.

ಭಾನುವಾರ ವಿಜಯಪುರ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್‌, ಎಸ್ಪಿ ಎಚ್. ಡಿ. ಆನಂದ ಕುಮಾರ ಸೇರಿದಂತೆ ಹಲವು ಅಧಿಕಾರಿಗಳು ಮಠಕ್ಕೆ ಭೇಟಿ ನೀಡಿದ್ದರು. ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದರು.

ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಜೊತೆ ಅರ್ಧಗಂಟೆಗಳ ಕಾಲ ಮಾತನಾಡಿದ್ದರು.

Siddheshwar Swamiji Health Siddaramaiah Visits Vijayapura

ಪ್ರಧಾನಿ ನರೇಂದ್ರ ಮೋದಿ ಪ್ರಹ್ಲಾದ್ ಜೋಶಿಗೆ ಕರೆ ಮಾಡಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು. ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆಗೆ ಕೇಂದ್ರ ಹಾಗೂ ರಾಜ್ಯದಿಂದ ಎಲ್ಲ ರೀತಿಯ ಸಹಕಾರ ನೀಡುವಂತೆ ಸಚಿವರಿಗೆ ಸೂಚನೆ ಕೊಟ್ಟಿದ್ದರು.

ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ಒದಗಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಭಿಲಾಶೆ ವ್ಯಕ್ತಪಡಿಸಿರುವ ಬಗ್ಗೆ ಸಚಿವ ಪ್ರಹ್ಲಾದ್ ಜೋಶಿ ಶ್ರೀಗಳಿಗೆ ಮಾಹಿತಿ ನೀಡಿದ್ದರು. ಆಗ ಸಿದ್ದೇಶ್ವರ ಶ್ರೀಗಳು ಕೈ ಮುಗಿದಿದ್ದರು.

ಸಿದ್ದೇಶ್ವರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಬೆಳಗಾವಿಯ ಹುಕ್ಕೇರಿ ಹಿರೇಮಠದಲ್ಲಿ ಜಯಮೃತ್ಯುಂಜಯ ಹೋಮ ನೆರವೇರಿಸಲಾಯಿತು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋಮ ನಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+