Siddheshwar Swamiji Health : ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

ವಿಜಯಪುರ, ಜನವರಿ 01; ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಮಠಕ್ಕೆ ಧಾವಿಸಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿಗಳಿಗೆ ವೈದ್ಯರ ತಂಡ ಯೋಗಾಶ್ರಮದಲ್ಲಿಯೇ ಚಿಕಿತ್ಸೆ ಮುಂದುವರೆಸಿದೆ. ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಆಗಮಿಸಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿಗಳಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ವಿಜಯಪುರ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್‌, ಎಸ್ಪಿ ಎಚ್. ಡಿ. ಆನಂದ ಕುಮಾರ ಸೇರಿದಂತೆ ಹಲವು ಅಧಿಕಾರಿಗಳು ಮಠದಲ್ಲಿದ್ದಾರೆ.

Siddheshwar Swamiji Health Suttur Mutt Swamiji Visits Vijayapura

ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಜೊತೆ ಅರ್ಧಗಂಟೆಗಳ ಕಾಲ ಮಾತನಾಡಿದ್ದರು. ಶೀಘ್ರವಾಗಿ ಗುಣಮುಖರಾಗುವಂತೆ ಆಶಯ ವ್ಯಕ್ತಪಡಿಸಿದ್ದರು.

ಇದೇ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಹ್ಲಾದ್ ಜೋಶಿಗೆ ಕರೆ ಮಾಡಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು. ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆಗೆ ಕೇಂದ್ರ ಹಾಗು ರಾಜ್ಯದಿಂದ ಎಲ್ಲ ರೀತಿಯ ಸಹಕಾರ ನೀಡುವಂತೆ ಸಚಿವರಿಗೆ ಸೂಚನೆ ನೀಡಿದ್ದರು.

ಹೆಚ್ಚಿನ ಚಿಕಿತ್ಸೆ ಒದಗಿಸುವ ಬಗ್ಗೆ ಪ್ರಧಾನಿಗಳು ಅಭಿಲಾಶೆ ವ್ಯಕ್ತಪಡಿಸಿರುವ ಬಗ್ಗೆ ಶ್ರೀಗಳಿಗೆ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದರು. ಆಗ ಸಿದ್ದೇಶ್ವರ ಶ್ರೀಗಳು ಕೈ ಮುಗಿದಿದ್ದರು.

ಸಿದ್ದೇಶ್ವರ ಸ್ವಾಮೀಜಿಗಳನ್ನು ನೋಡಲು ಅಪಾರ ಭಕ್ತರು ಮಠದತ್ತ ಆಗಮಿಸುತ್ತಿದ್ದಾರೆ. ಶನಿವಾರ ಸಹ ನೂರಾರು ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆಯಬೇಕು ಎಂದು ಪಟ್ಟು ಹಿಡಿದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+