ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಂದಗಿ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಗೆಲುವಿಗೆ, ಕಾಂಗ್ರೆಸ್ ಸೋಲಿಗೆ ಕಾರಣಗಳೇನು?

|
Google Oneindia Kannada News

ವಿಜಯಪುರ, ನವೆಂಬರ್ 2: 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಒಂದೂವರೆ ವರ್ಷ ಇರುವಾಗಲೇ ಪ್ರಾಮುಖ್ಯತೆ ಪಡೆದಿದ್ದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ರಾಜ್ಯದ ಜನರ ಗಮನ ಸೆಳೆದಿತ್ತು.

ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

By Election Result: ಹಾನಗಲ್‌, ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್By Election Result: ಹಾನಗಲ್‌, ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್

ಬಿಜೆಪಿಯ ರಮೇಶ್ ಭೂಸನೂರಗೆ 93,865 ಮತ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಮತ ದೊರೆತಿದ್ದು, 31,185 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಜಯ ಲಭಿಸಿದೆ.

 Sindagi By Election Result 2021: Reasons For BJP Win And Congress Lose

ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. 22 ಸುತ್ತಿನ ಸಿಂದಗಿ ಮತ ಎಣಿಕೆ ಕಾರ್ಯದಲ್ಲಿ ಪ್ರತಿ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಗಳಿಸಿದ್ದರು.

ಜೆಡಿಎಸ್ ಶಾಸಕರಾಗಿದ್ದ ಎಂ.ಸಿ. ಮನಗೂಳಿ ನಿಧನದ ಬಳಿಕ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಆ ನಂತರ ಮೂರು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿತ್ತು. ಪ್ರಚಾರದ ವೇಳೆ ರಾಜಕೀಯ ನಾಯಕರ ವೈಯಕ್ತಿಕ ಟೀಕೆಗಳಿಗೆ ಸಾಕ್ಷಿಯಾಗಿತ್ತು.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಗೆಲುವಿಗೆ ಕಾರಣಗಳು
1. ಸಿಂದಗಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಪರ ಕಳೆದ ಬಾರಿ ಕಡಿಮೆ ಅಂತರದ ಸೋಲಿನ ಅನುಕಂಪ ಕೆಲಸ ಮಾಡಿದ್ದು, ಪಂಚಮಸಾಲಿ ಮತಗಳು ಕೈ ತಪ್ಪದಂತೆ ಸಚಿವ ಸಿ.ಸಿ. ಪಾಟೀಲ್ ಹೆಗಲಿಗೆ ಜವಾಬ್ದಾರಿ ಹೊರಿಸಲಾಗಿತ್ತು. ಅದನ್ನು ಉತ್ತಮವಾಗಿ ನಿಭಾಯಿಸಿದ್ದಾರೆ.

2. ಉಪ ಚುನಾವಣೆಯಲ್ಲಿ ಲಿಂಗಾಯತ ಮತ ನಿರ್ಣಾಯಕವಾಗಿದ್ದರಿಂದ ಅವರ ವಿಶ್ವಾಸ ಗಳಿಸಲು ಸಚಿವ ವಿ. ಸೋಮಣ್ಣ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವಿರತ ಕೆಲಸ ಮಾಡಿದ್ದಾರೆ.

 Sindagi By Election Result 2021: Reasons For BJP Win And Congress Lose

3. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಪ್ರಭಾವ ಬೀರಿದ್ದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಪ್ರಚಾರ. ಈ ಎಲ್ಲದರಿಂದ ಲಿಂಗಾಯತ ಸಮುದಾಯದ ಮತಗಳು ವರ್ಗಾವಣೆ ಆಗದಂತೆ ತಡೆಯುವಲ್ಲಿ ಸಫಲವಾಗಿದ್ದರಿಂದ ಬಿಜೆಪಿ ಅಭ್ಯರ್ಥಿ ಗೆಲುವಿನ ನಗೆ ಬೀಗಿದ್ದಾರೆ.

4. ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್‌ಗೆ ಹೋಗದಂತೆ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ತಡೆದಿರುವುದು ಬಿಜೆಪಿಗೆ ಪರೋಕ್ಷ ಸಹಾಯವಾಗಿದೆ. ಪ್ರತಿ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಸಚಿವರನ್ನು ನೇಮಿಸಿ ಕಾರ್ಯತಂತ್ರ ರೂಪಿಸಿದ್ದು, ಶಾಸಕರು ಮತ್ತು ಜಿಲ್ಲಾ ನಾಯಕರು ಗ್ರಾಮಗಳಲ್ಲೇ ವಾಸ್ತವ್ಯ ಹೂಡಿ ಮತದಾರರ ಮನವೊಲಿಕೆಯಲ್ಲಿ ಸಫಲರಾಗಿದ್ದಾರೆ.

5. ಕ್ಷೇತ್ರದ ಅಭಿವೃದ್ಧಿಗೆ ಆಡಳಿತಾರೂಢ ಪಕ್ಷವನ್ನು ಬೆಂಬಲಿಸುವ ಮನಸ್ಥಿತಿಗೆ ಮತದಾರರ ಮನವೊಲಿಕೆ ಮಾಡಿದ್ದು, ಜೆಡಿಎಸ್‌ನಿಂದ ಪಕ್ಷಾಂತರಗೊಂಡ ಕೈ ಅಭ್ಯರ್ಥಿಯನ್ನು ಒಪ್ಪಿಕೊಳ್ಳಲು ಮತದಾರ ಹಿಂದೇಟು ಹಾಕಿದ್ದು, ಬಿಜೆಪಿ ನಾಯಕರ ಸಂಘಟಿತ ಪ್ರಚಾರ ಮತ್ತು ಸಿಂದಗಿ ಕ್ಷೇತ್ರದ ಅಭಿವೃದ್ಧಿಯ ವಿಚಾರ ಪ್ರಚಾರ ಮಾಡಿದ್ದು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಿದೆ.

 Sindagi By Election Result 2021: Reasons For BJP Win And Congress Lose

6. ಹಿಂದೂಪರ ಸಂಘಟನೆಗಳು ತೆರೆಮರೆಯಲ್ಲಿ ನಡೆಸಿದ ಪ್ರಚಾರದಿಂದಾಗಿ ಹಿಂದೂ ಮತಗಳ ಕ್ರೋಢೀಕರಣವಾಗಿದ್ದು, ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರನ್ನು ಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡಿದ್ದು ಆಡಳಿತಾರೂಢ ಬಿಜೆಪಿಗೆ ವರದಾನವಾಗಿದೆ.

ಸಿಂದಗಿಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣಗಳೇನು?
1. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಬಗ್ಗೆ ಸ್ಥಳೀಯ ನಾಯಕರಲ್ಲಿ ಅಸಮಾಧಾನ ಉದ್ಭವಿಸಿದ್ದು. ಜೆಡಿಎಸ್‌ನಿಂದ ಬಂದ ಅಶೋಕ್ ಮನಗೂಳಿಗೆ ಟಿಕೆಟ್ ನೀಡಿದ್ದಕ್ಕೆ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿತ್ತು.

2. ಸ್ಥಳೀಯ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಸೇರಿದಂತೆ ಹಲವು ಮೂಲ‌ ಕಾಂಗ್ರೆಸ್ಸಿಗರು ಒಲ್ಲದ ಮನಸ್ಸಿನಿಂದಲೇ ಪ್ರಚಾರ ಕೆಲಸದಲ್ಲಿ ತೊಡಗಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆ ಅಶೋಕ್ ಹೊಂದಾಣಿಕೆ ಮಾಡಿಕೊಳ್ಳದಿರುವುದು. ಪರ್ಯಾಯ ಕಾರ್ಯಕರ್ತರು ಬೆಂಬಲಿಗರ ಪಡೆ ಕಟ್ಟಿಕೊಂಡು ಕೆಲಸ ಮಾಡಿದ್ದು ಕಾಂಗ್ರೆಸ್ ಹಿನ್ನಡೆಗೆ ಕಾರಣವಾಗಿದೆ.

3. ಕಳೆದ ಒಂದು ವರ್ಷದಿಂದ ತಮ್ಮ ಬೆಂಬಲಿಗರ ಜೊತೆಯಷ್ಟೆ ಕೆಲಸ ಮಾಡಿಕೊಂಡಿದ್ದು, ಕೈ ಲೆಕ್ಕಾಚಾರದಂತೆ ಕಾಂಗ್ರೆಸ್ ಪರವಾಗಿ ಧ್ರುವಿಕರಣವಾಗದ ಪಂಚಮಸಾಲಿ ಮತಗಳು. ಕಾಂಗ್ರೆಸ್‌ನ ಸಾಂಪ್ರದಾಯಿಕ‌ ಮತಗಳಾದ ನಾಯಕ, ಪರಿವಾರ ಮತಗಳು ಈ ಬಾರಿ ಬಿಜೆಪಿ ಪರ ಒಲವು ತೋರಿದ್ದು, ಅಹಿಂದ ಮತಗಳು ಕೂಡ ಕಾಂಗ್ರೆಸ್‌ನಿಂದ ದೂರವಾಗಿದ್ದಲ್ಲದೇ, ಅಲ್ಪಸಂಖ್ಯಾತ ಸಮುದಾಯ ಮತದಾರರು ಬಿಜೆಪಿಗೆ ಮತ ಹಾಕಿರುವುದು ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ.

Recommended Video

ಅಪ್ಪು ಸಾವಿನಿಂದ ಕಂಗೆಟ್ಟು ಜಯದೇವ ಆಸ್ಪತ್ರೆಯಲ್ಲಿ ತುಂಬಿದ ಜನಸಾಗರ | Oneindia Kannada

4. ಇನ್ನು ಸಚಿವರಾದ ಕೆ.ಎಸ್. ಈಶ್ವರಪ್ಪ, ಎಂಟಿಬಿ ನಾಗರಾಜ್ ಹಾಗೂ ಭೈರತಿ ಬಸವರಾಜ್‌ರಿಂದ ಕುರುಬ ಮತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೂಲಕ ಪಂಚಮಸಾಲಿ ಮತಗಳನ್ನು ಚದುರಿಸಿದ್ದು, ಬಿಜೆಪಿ ಗೆಲುವಿಗೆ ಪೂರಕವಾಯಿತು. ಕಾಂಗ್ರೆಸ್ ನಾಯಕರು ದೊಡ್ಡ ಸಮಾವೇಶ ಮಾಡಿದರೂ, ಕಾರ್ಯಕರ್ತರು ಮಾತ್ರ ಅಭ್ಯರ್ಥಿಯಿಂದ ದೂರವೇ ಉಳಿದುಬಿಟ್ಟಿದ್ದು ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಪ್ರಮುಖ ಕಾರಣವಾಗಿದೆ.

English summary
Sindagi By Election Result 2021: Here are the Reasons for BJP candidate win, Congress and JDS candidates Lose. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X