ಸಿಂಧಗಿ ಕ್ಷೇತ್ರದ ಉಪ ಚುನಾವಣೆ; ಜಾತಿ ಲೆಕ್ಕಾಚಾರ ಹೀಗಿದೆ
ವಿಜಯಪುರ, ಅಕ್ಟೋಬರ್ 24; ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಪ್ರಚಾರದ ಭರಾಟೆ ನಡುವೆಯೇ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ಆರಂಭವಾಗಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಉಪ ಚುನಾವಣೆಗೆ ಬಿಜೆಯಿಂದ ರಮೇಶ ಭೂಸನೂರ, ಕಾಂಗ್ರೆಸ್‌ನಿಂ ಅಶೋಕ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜಿಯಾ ಅಂಗಡಿ ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ಕ್ಷೇತ್ರದ ಚುನಾವಣಾ ಚಿತ್ರಣ ಬದಲಿಸಿದೆ. ಇನ್ನು ಕ್ಷೇತ್ರದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಬಿಜೆಪಿ ಪ್ರಚಾರ ನಡೆಸುತ್ತಿದೆ. "ಹಿಂದೂಗಳಿಗೆ ನೀಡಿದ ಸೌಲಭ್ಯಗಳನ್ನು ಮುಸ್ಲಿಂ ಸಮಯದಾಯಕ್ಕೂ ನೀಡಲಾಗಿದೆ. ನೀಡಿಲ್ಲ ಎನ್ನುವುದಾದರೆ ಉದಾಹರಣೆ ತೋರಿಸಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ" ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಸಿಂಧಗಿ ಉಪ ಚುನಾವಣೆ ಘೋಷಣೆಯಾದಾಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಎಂದು ನಿರೀಕ್ಷೆ ಮಾಡಲಾಗಿತ್ತು. ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿತು. ಈಗ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದು, ತ್ರಿಕೋನ ಸ್ಪರ್ಧೆ ನಡೆಯಲಿದೆ ಎನ್ನುತ್ತಾರೆ ಸ್ಥಳೀಯರು.
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗಾಣಿಗ ಸಮುದಾಯಕ್ಕೆ ಸೇರಿದವರು. ಕಾಂಗ್ರೆಸ್‌ನ ಅಶೋಕ ಮನಗೂಳಿ ಲಿಂಗಾಯತ ಸಮುದಾಯದವರು. ಜೆಡಿಎಸ್‌ನ ನಾಜಿಯಾ ಅಂಗಡಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ. ಯಾವ ಸಮುದಾಯದ ಮತಗಳನ್ನು ಯಾರು ಸೆಳೆಯಲಿದ್ದಾರೆ? ಎಂಬ ಲೆಕ್ಕಾಚಾರಗಳು ಕ್ಷೇತ್ರದಲ್ಲಿ ಜೋರಾಗಿವೆ.

ಯಾವ ಮತಗಳು ಎಷ್ಟು?
ಸಿಂಧಗಿ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದ ಮತದಾರರು ಹೆಚ್ಚು. ಎರಡನೇ ಸ್ಥಾನದಲ್ಲಿ ಹಿಂದುಳಿದವರು, ಮೂರನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತದಾರರು ಇದ್ದಾರೆ. ಕ್ಷೇತ್ರದಲ್ಲಿರುವ ಮುಸ್ಲಿಂ ಸಮುದಾಯದ ಮತಗಳು ಸುಮಾರು 20 ಸಾವಿರ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮಯದಾಯ ಬೆಂಬಲ ನೀಡುತ್ತಿತ್ತು. ಆದರೆ ಈ ಬಾರಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದೆ. ಅಲ್ಲದೇ ಜೆಡಿಎಸ್‌ನ ಶಾಸಕರಾಗಿದ್ದ ಎಂ. ಸಿ. ಮನಗೂಳಿ ಪುತ್ರ ಅಶೋಕ ಮನಗೂಳಿ ಕಾಂಗ್ರೆಸ್ ಸೇರಿದ್ದಾರೆ. ಇದು ಚುನಾವಣೆಯಲ್ಲಿ ಯಾವ ಪರಿಣಾಮ ಬೀರಲಿದೆ? ಎಂದು ಕಾದು ನೋಡಬೇಕು.

ಕ್ಷೇತ್ರದ ಜಾತಿ ಲೆಕ್ಕಾಚಾರ
ಸಿಂಧಗಿ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,32,309 ಆಗಿದೆ. ರೆಡ್ಡಿ, ಲಿಂಗಾಯತ, ಗಾಣಿಗ, ಬಣಜಿಗ, ಇತರೆ ಸೇರಿ ಅಂದಾಜು 1,24,143 ಮತದಾರರು ಇದ್ದಾರೆ. ಕುರುಬ, ತಳವಾರ, ಸವಿತಾ ಸಮಾಜ, ಕುಂಬಾರ ಇತರೆ ಸೇರಿ ಸುಮಾರು 60,784 ಮತದಾರರು ಇದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹರಿಜನ, ಲಂಬಾಣಿ, ಇತರೆ ಸೇರಿ ಸುಮಾರು 27,637 ಮತದಾರರು ಇದ್ದಾರೆ. ಮುಸ್ಲಿಂ ಮತಗಳು 20,465, ಜೈನ ಸಮುದಾಯದ ಮತಗಳು ಸುಮಾರು 280.

ಹ್ಯಾಟ್ರಿಕ್ ಲೆಕ್ಕಾಚಾರದಲ್ಲಿದ್ದ ಬಿಜೆಪಿ
2018ರಲ್ಲಿ ಬಿಜೆಪಿಯ ರಮೇಶ ಭೂಸನೂರ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ಜೆಡಿಎಸ್‌ನ ಎಂ. ಸಿ. ಮನಗೂಳಿ ವಿರುದ್ಧ 9,305 ಮತಗಳ ವಿರುದ್ಧ ಸೋಲು ಕಂಡಿದ್ದರು. ಎಂ. ಸಿ. ಮನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಎದುರಾಗಿದೆ. ರಮೇಶ ಭೂಸನೂರ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿ ಕ್ಷೇತ್ರದ ಚುನಾವಣಾ ಚಿತ್ರಣ ಬದಲಿಸಿದೆ.

ಕ್ಷೇತ್ರದ ಮತದಾರರ ವಿವರ
ಸಿಂಧಗಿ ಉಪಚುನಾವಣೆಯಲ್ಲಿ ಒಟ್ಟು ಮತದಾರರು 2,34,309. ಇವರಲ್ಲಿ 1,20,949 ಪುರುಷರು, 1,13,327 ಮಹಿಳೆಯರು ಹಾಗೂ ಇತರ ಮತದಾರರು 33.
2018ರ ಚುನಾವಣೆಯಲ್ಲಿ ಬಿಜೆಪಿಯ ರಮೇಶ ಭೂಸನೂರ 61,560 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ಎಂ. ಸಿ. ಮನಗೂಳಿ 70,865 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಸಾಲಿ ಮಲ್ಲಣ್ಣ ನಿಂಗಪ್ಪ 22,818.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications