ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಂಧಗಿ ಕ್ಷೇತ್ರದ ಉಪ ಚುನಾವಣೆ; ಜಾತಿ ಲೆಕ್ಕಾಚಾರ ಹೀಗಿದೆ

|
Google Oneindia Kannada News

ವಿಜಯಪುರ, ಅಕ್ಟೋಬರ್ 24; ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಪ್ರಚಾರದ ಭರಾಟೆ ನಡುವೆಯೇ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ಆರಂಭವಾಗಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಉಪ ಚುನಾವಣೆಗೆ ಬಿಜೆಯಿಂದ ರಮೇಶ ಭೂಸನೂರ, ಕಾಂಗ್ರೆಸ್‌ನಿಂ ಅಶೋಕ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜಿಯಾ ಅಂಗಡಿ ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ಕ್ಷೇತ್ರದ ಚುನಾವಣಾ ಚಿತ್ರಣ ಬದಲಿಸಿದೆ. ಇನ್ನು ಕ್ಷೇತ್ರದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಬಿಜೆಪಿ ಪ್ರಚಾರ ನಡೆಸುತ್ತಿದೆ. "ಹಿಂದೂಗಳಿಗೆ ನೀಡಿದ ಸೌಲಭ್ಯಗಳನ್ನು ಮುಸ್ಲಿಂ ಸಮಯದಾಯಕ್ಕೂ ನೀಡಲಾಗಿದೆ. ನೀಡಿಲ್ಲ ಎನ್ನುವುದಾದರೆ ಉದಾಹರಣೆ ತೋರಿಸಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ" ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಹಾನಗಲ್, ಸಿಂಧಗಿ ಚುನಾವಣಾ ಕಣದಲ್ಲಿ ಸಿದ್ದರಾಮಯ್ಯರಿಗೆ ಸಿಕ್ಕ ಸುಳಿವಿನ ಸೀಕ್ರೆಟ್!? ಹಾನಗಲ್, ಸಿಂಧಗಿ ಚುನಾವಣಾ ಕಣದಲ್ಲಿ ಸಿದ್ದರಾಮಯ್ಯರಿಗೆ ಸಿಕ್ಕ ಸುಳಿವಿನ ಸೀಕ್ರೆಟ್!?

ಸಿಂಧಗಿ ಉಪ ಚುನಾವಣೆ ಘೋಷಣೆಯಾದಾಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಎಂದು ನಿರೀಕ್ಷೆ ಮಾಡಲಾಗಿತ್ತು. ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿತು. ಈಗ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದು, ತ್ರಿಕೋನ ಸ್ಪರ್ಧೆ ನಡೆಯಲಿದೆ ಎನ್ನುತ್ತಾರೆ ಸ್ಥಳೀಯರು.

ಸಿಂಧಗಿ ಉಪ ಚುನಾವಣೆ ಚಿತ್ರಣ ಬದಲಿಸಿದ ಜೆಡಿಎಸ್! ಸಿಂಧಗಿ ಉಪ ಚುನಾವಣೆ ಚಿತ್ರಣ ಬದಲಿಸಿದ ಜೆಡಿಎಸ್!

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗಾಣಿಗ ಸಮುದಾಯಕ್ಕೆ ಸೇರಿದವರು. ಕಾಂಗ್ರೆಸ್‌ನ ಅಶೋಕ ಮನಗೂಳಿ ಲಿಂಗಾಯತ ಸಮುದಾಯದವರು. ಜೆಡಿಎಸ್‌ನ ನಾಜಿಯಾ ಅಂಗಡಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ. ಯಾವ ಸಮುದಾಯದ ಮತಗಳನ್ನು ಯಾರು ಸೆಳೆಯಲಿದ್ದಾರೆ? ಎಂಬ ಲೆಕ್ಕಾಚಾರಗಳು ಕ್ಷೇತ್ರದಲ್ಲಿ ಜೋರಾಗಿವೆ.

ಹಾನಗಲ್, ಸಿಂಧಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೊಷಣೆ ಹಾನಗಲ್, ಸಿಂಧಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೊಷಣೆ

ಯಾವ ಮತಗಳು ಎಷ್ಟು?

ಯಾವ ಮತಗಳು ಎಷ್ಟು?

ಸಿಂಧಗಿ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದ ಮತದಾರರು ಹೆಚ್ಚು. ಎರಡನೇ ಸ್ಥಾನದಲ್ಲಿ ಹಿಂದುಳಿದವರು, ಮೂರನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತದಾರರು ಇದ್ದಾರೆ. ಕ್ಷೇತ್ರದಲ್ಲಿರುವ ಮುಸ್ಲಿಂ ಸಮುದಾಯದ ಮತಗಳು ಸುಮಾರು 20 ಸಾವಿರ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮಯದಾಯ ಬೆಂಬಲ ನೀಡುತ್ತಿತ್ತು. ಆದರೆ ಈ ಬಾರಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದೆ. ಅಲ್ಲದೇ ಜೆಡಿಎಸ್‌ನ ಶಾಸಕರಾಗಿದ್ದ ಎಂ. ಸಿ. ಮನಗೂಳಿ ಪುತ್ರ ಅಶೋಕ ಮನಗೂಳಿ ಕಾಂಗ್ರೆಸ್ ಸೇರಿದ್ದಾರೆ. ಇದು ಚುನಾವಣೆಯಲ್ಲಿ ಯಾವ ಪರಿಣಾಮ ಬೀರಲಿದೆ? ಎಂದು ಕಾದು ನೋಡಬೇಕು.

ಕ್ಷೇತ್ರದ ಜಾತಿ ಲೆಕ್ಕಾಚಾರ

ಕ್ಷೇತ್ರದ ಜಾತಿ ಲೆಕ್ಕಾಚಾರ

ಸಿಂಧಗಿ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,32,309 ಆಗಿದೆ. ರೆಡ್ಡಿ, ಲಿಂಗಾಯತ, ಗಾಣಿಗ, ಬಣಜಿಗ, ಇತರೆ ಸೇರಿ ಅಂದಾಜು 1,24,143 ಮತದಾರರು ಇದ್ದಾರೆ. ಕುರುಬ, ತಳವಾರ, ಸವಿತಾ ಸಮಾಜ, ಕುಂಬಾರ ಇತರೆ ಸೇರಿ ಸುಮಾರು 60,784 ಮತದಾರರು ಇದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹರಿಜನ, ಲಂಬಾಣಿ, ಇತರೆ ಸೇರಿ ಸುಮಾರು 27,637 ಮತದಾರರು ಇದ್ದಾರೆ. ಮುಸ್ಲಿಂ ಮತಗಳು 20,465, ಜೈನ ಸಮುದಾಯದ ಮತಗಳು ಸುಮಾರು 280.

ಹ್ಯಾಟ್ರಿಕ್‌ ಲೆಕ್ಕಾಚಾರದಲ್ಲಿದ್ದ ಬಿಜೆಪಿ

ಹ್ಯಾಟ್ರಿಕ್‌ ಲೆಕ್ಕಾಚಾರದಲ್ಲಿದ್ದ ಬಿಜೆಪಿ

2018ರಲ್ಲಿ ಬಿಜೆಪಿಯ ರಮೇಶ ಭೂಸನೂರ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ಜೆಡಿಎಸ್‌ನ ಎಂ. ಸಿ. ಮನಗೂಳಿ ವಿರುದ್ಧ 9,305 ಮತಗಳ ವಿರುದ್ಧ ಸೋಲು ಕಂಡಿದ್ದರು. ಎಂ. ಸಿ. ಮನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಎದುರಾಗಿದೆ. ರಮೇಶ ಭೂಸನೂರ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿ ಕ್ಷೇತ್ರದ ಚುನಾವಣಾ ಚಿತ್ರಣ ಬದಲಿಸಿದೆ.

ಕ್ಷೇತ್ರದ ಮತದಾರರ ವಿವರ

ಕ್ಷೇತ್ರದ ಮತದಾರರ ವಿವರ

ಸಿಂಧಗಿ ಉಪಚುನಾವಣೆಯಲ್ಲಿ ಒಟ್ಟು ಮತದಾರರು 2,34,309. ಇವರಲ್ಲಿ 1,20,949 ಪುರುಷರು, 1,13,327 ಮಹಿಳೆಯರು ಹಾಗೂ ಇತರ ಮತದಾರರು 33.

2018ರ ಚುನಾವಣೆಯಲ್ಲಿ ಬಿಜೆಪಿಯ ರಮೇಶ ಭೂಸನೂರ 61,560 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ಎಂ. ಸಿ. ಮನಗೂಳಿ 70,865 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಸಾಲಿ ಮಲ್ಲಣ್ಣ ನಿಂಗಪ್ಪ 22,818.

English summary
Sindagi by elections will be held on October 30. Caste calculation of the assembly seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X