ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಂಧಗಿ ಕ್ಷೇತ್ರದ ಉಪ ಚುನಾವಣೆ; ಸ್ಪಷ್ಟನೆ ಕೊಟ್ಟ ಲಕ್ಷ್ಮಣ ಸವದಿ

|
Google Oneindia Kannada News

ವಿಜಯಪುರ, ಸೆಪ್ಟೆಂಬರ್ 28: ಕೇಂದ್ರ ಚುನಾವಣಾ ಆಯೋಗ ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ? ಎಂಬುದು ಕುತೂಹಲ ಮೂಡಿಸಿದೆ.

ಮಾಜಿ ಸಚಿವ ಲಕ್ಷ್ಮಣ ಸವದಿ ಸಿಂಧಗಿ ಉಪ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಉಪ ಚುನಾವಣೆಯಲ್ಲಿ ನಾನು ಹಾಗೂ ನನ್ನ ಪುತ್ರ ಚಿದಾನಂದ ಸವದಿ ಯಾರೂ ಸ್ಪರ್ಧೆ ಮಾಡುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

ಸಿಂಧಗಿ; ಉಪ ಚನಾವಣೆಗೆ ಮುನ್ನ ಆಪರೇಷನ್ ಜೆಡಿಎಸ್! ಸಿಂಧಗಿ; ಉಪ ಚನಾವಣೆಗೆ ಮುನ್ನ ಆಪರೇಷನ್ ಜೆಡಿಎಸ್!

"ಸಿಂಧಗಿ ಉಪ ಚುನಾವಣೆ ಉಸ್ತುವಾರಿಯಾಗಿ ನನ್ನನ್ನು ನೇಮಿಸಲಾಗಿದೆ. ನಾನು ಶೀಘ್ರದಲ್ಲಿಯೇ ಕ್ಷೇತ್ರಕ್ಕೆ ತೆರಳಿ ಅಲ್ಲಿರುವ ಪಕ್ಷದ ಮುಖಂಡರು, ಸ್ಥಳೀಯ ನಾಯಕರ ಜೊತೆ ಮಾತುಕತೆ ನಡೆಸುತ್ತೇನೆ. ಅಭ್ಯರ್ಥಿ ಯಾರು? ಎಂಬುದು ಇನ್ನೂ ಘೋಷಣೆಯಾಗಿಲ್ಲ" ಎಂದರು.

ವಿಜಯಪುರ : ಸಿಂಧಗಿ ಬಿಜೆಪಿ ಅಭ್ಯರ್ಥಿ ಬಂಧನ, ಬಿಡುಗಡೆವಿಜಯಪುರ : ಸಿಂಧಗಿ ಬಿಜೆಪಿ ಅಭ್ಯರ್ಥಿ ಬಂಧನ, ಬಿಡುಗಡೆ

Sindagi By Elections Clarification By Lakshman Savadi

"ಸಿಂಧಗಿ, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ. ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಿಲ್ಲೆಯಾಗಿದೆ. ಆದ್ದರಿಂದ ಅಲ್ಲಿನ ಜನರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ" ಎಂದು ಲಕ್ಷ್ಮಣ ಸವದಿ ಹೇಳಿದರು.

Breaking: ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆBreaking: ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

ಶಾಸಕರ ಅಕಾಲಿಕ ಮರಣ; ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಎಂ. ಸಿ. ಮನಗೂಳಿ ಅಕಾಲಿಕ ಮರಣದಿಂದಾಗಿ ಉಪ ಚುನಾವಣೆ ಎದುರಾಗಿದೆ. ಅಕ್ಟೋಬರ್ 30ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಎಂ. ಸಿ. ಮನಗೂಳಿ ನಿಧನದ ಬಳಿಕ ಕುಟುಂಬ ಸದಸ್ಯರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಎಂ. ಸಿ. ಮನಗೂಳಿ ಪುತ್ರ ಅಶೋಕ್ ಮನಗೂಳಿ ಈಗಾಗಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಟಿಕೆಟ್‌ಗಾಗಿ ಲಾಬಿ ನಡೆಯುತ್ತಿದೆ. ಅದರಲ್ಲೂ ಬಿಜೆಪಿ ಸರ್ಕಾರ ಇರುವುದರಿಂದ ಟಿಕೆಟ್‌ಗಾಗಿ ಭಾರೀ ಪೈಪೋಟಿ ಇದೆ. ಕೆಲವು ದಿನಗಳ ಹಿಂದೆ ಬಿ. ವೈ. ವಿಜಯೇಂದ್ರ ಹೆಸರು ಸಹ ಕ್ಷೇತ್ರಕ್ಕೆ ಕೇಳಿ ಬಂದಿತ್ತು.

ಮಾಜಿ ಶಾಸಕ ರಮೇಶ ಭೂಸನೂರು ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಕ್ಷೇತ್ರ ಉಳಿಸಿಕೊಳ್ಳಲು ಪ್ರಭಾವಿ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಅಕ್ಟೋಬರ್ 8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ; ಸಿಂಧಗಿ ಮತ್ತು ಹಾನಗಲ್ ಉಪ ಚುನಾವಣೆ ಘೋಷಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. "ನೆನೆಗುದಿಗೆ ಬಿದ್ದಿದ್ದ ಉಪಚುನಾವಣೆ ಘೋಷಣೆಯಾಗಿದೆ. ಸಿಂಧಗಿಯಲ್ಲಿ ಅಶೋಕ್ ‌ಮನಗೂಳಿ‌ ಅಭ್ಯರ್ಥಿ ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ" ಎಂದು ಹೇಳಿದರು.

"ಹಾನಗಲ್ ಅಭ್ಯರ್ಥಿ ಆಯ್ಕೆಯಾಗಬೇಕಿದೆ. ಮನೋಹರ್ ತಹಶಿಲ್ದಾರ್, ಶ್ರೀನಿವಾಸ್ ಮಾನೆ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇವರ ಜೊತೆ ಇನ್ನೂ ಕೆಲವರು ಟಿಕೆಟ್ ಕೇಳಿದ್ದಾರೆ. ನಮ್ಮ ವರಿಷ್ಠರು ಇಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳುತ್ತಾರೆ. ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗೆ ಪ್ರತಿಷ್ಠೆ; ಎರಡು ಕ್ಷೇತ್ರದ ಉಪ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭೆ ಉಪ ಚುನಾವಣೆಯಾಗಿದೆ.

ಮುಖ್ಯಮಂತ್ರಿಗಳು ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಶಾಸಕರು ತವರು ಜಿಲ್ಲೆಯಲ್ಲಿಯೇ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದೆ.

Recommended Video

ನೋಡನೋಡ್ತಿದ್ದಂತೆ ಪ್ರಯಾಣಿಕರಿದ್ದ ಬಸ್ ನೀರು ಪಾಲಾದ ವಿಡಿಯೋ | Oneindia Kannada

ಬಿಜೆಪಿಯ ಹಿರಿಯ ನಾಯಕರಾಗಿದ್ದ ಸಿ. ಎಂ. ಉದಾಸಿ ನಿಧನದಿಂದ ತೆರವಾಗಿರುವ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯಾಗಿದೆ. ಜೆಡಿಎಸ್ ಪಕ್ಷ ಈಗಾಗಲೇ ನಿಯಾಜ್ ಶೇಖ್ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

English summary
Election commission of India announced by elections for the Sindagi assembly polls. BJP leader Lakshman Savadi clarification about his son contesting as BJP candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X