ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಗಡಿ ಭಾಗದಲ್ಲಿ ಕಟ್ಟೆಚ್ಚರ: ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ವಿಜಯಪುರ, ಏಪ್ರಿಲ್ 26: ರಾಜ್ಯದಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಅವರು ತಿಳಿಸಿದರು.

ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವೊಡ್ ಸ್ಥಿತಿಗತಿ ಬಗ್ಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರಿಗೆ ವಿವತಿಸಾಗುವುದು ಎಂದು ಅವರು ಹೇಳಿದರು.

ಕೋವಿಡ್ 19 ಕುರಿತು ಪ್ರಧಾನಿ ವಿಡಿಯೋ ಸಂವಾದ: ಮಂಗಳೂರಿನಿಂದ ಸಿಎಂ ಭಾಗಿಕೋವಿಡ್ 19 ಕುರಿತು ಪ್ರಧಾನಿ ವಿಡಿಯೋ ಸಂವಾದ: ಮಂಗಳೂರಿನಿಂದ ಸಿಎಂ ಭಾಗಿ

ವಿಮಾನ ನಿಲ್ದಾಣಗಳಲ್ಲಿ ಹಾಗೂ ವಿಶೇಷವಾಗಿ ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗಗಳಲ್ಲಿ ತಪಾಸಣೆ ಮತ್ತು ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Slight Rise in Covid-19 Cases in Karnataka; Taken Restrictions on Borders Says CM Basavarj Bommai

ಇತ್ತೀಚೆಗೆ ಎರಡು ದೇಶಗಳಲ್ಲಿ ಕೊರೊನಾ ಸಾಂಕ್ರಾಮಿಕ ಉಲ್ಬಣವಾಗಿದೆ. ಭಾರತದ ನೆರೆಯ ದೇಶಗಳಾದ ಥೈಲ್ಯಾಂಡ್, ಇಂಡೋನೇಷ್ಯಾ, ಚೈನಾ ದೇಶಗಳಲ್ಲಿಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇಲ್ಲ್ಲಿಯೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರಿಂದ ಪ್ರಧಾನಮಂತ್ರಿಗಳು ಮುಂಜಾಗ್ರತೆ ವಹಿಸಿ ಎಲ್ಲ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ನಿನ್ನೆ ನಡೆದಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಕೆಲವು ಕರೋನಾ ಸೂಕ್ತ ನಡವಳಿಕೆಗಳನ್ನು ಪುನ: ಜಾರಿಗೊಳಿಸಲು ಸೂಚಿಸಲಾಗಿದೆ‌. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಿದರೆ ಉತ್ತಮ. ಇದುವರೆಗೂ ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಆದರೂ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು‌.

ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಇನ್ನೂ ಕರೆದಿಲ್ಲ:

ಸಚಿವ ಸಂಪುಟ ವಿಸ್ತರಣೆಯ ಪ್ರಸ್ತಾವನೆ ಇದೆ. ಆದರೆ, ಪಟ್ಟಿ ಅಂತಿಮಗೊಳಿಸುವ ಸಂಬಂಧ ವರಿಷ್ಠರು ಇನ್ನೂ ಕರೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದಿದೆ. ರಾಜಕೀಯ ಸ್ಥಿತಿಗತಿಯ ಮೇಲೆ ಕೆಲವು ನಿರ್ಣಯಗಳಾಗುತ್ತವೆ ಎಂದರು.

ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

English summary
Covid-19 Cases in Karnataka: There is Slight Rise in Covid-19 Cases in state; Taken Restrictions on Borders Says CM Basavarj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X