ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ : ವಾಟ್ಸಪ್‌ನಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ

|
Google Oneindia Kannada News

ವಿಜಯಪುರ, ಮಾರ್ಚ್ 25 : ಇಂದು ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ವಿಜಯಪುರದಲ್ಲಿ ವಾಟ್ಸಪ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಡಿಡಿಪಿಐ ಖಚಿತಪಡಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಮೊರಟಗಿಯ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕೆ ಸೋರಿಕೆಯಾದ ಮಾಹಿತಿ ಅಧಿಕಾರಿಗಳಿಗೆ ತಲುಪಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ವಾಟ್ಸಪ್‌ನಲ್ಲಿ ಪಶ್ನೆ ಪತ್ರಿಕೆ ಹರಿರಾಡುತ್ತಿತ್ತು. ತಮ್ಮ ಬಳಿ ಇರುವ ಪ್ರಶ್ನೆ ಪತ್ರಿಕೆ ಪ್ರತಿಯೊಂದಿಗೆ ಹೋಲಿಕೆ ಮಾಡಿದಾಗ ಪತ್ರಿಕೆ ಸೋರಿಕೆ ಆಗಿರುವುದು ಖಚಿತವಾಗಿದೆ ಎಂದು ಡಿಡಿಪಿಐ ಪ್ರಸನ್ನ ಅವರು ಹೇಳಿದ್ದಾರೆ.

SSLC maths question paper leaked in Vijayapura

ಸೋಮವಾರ ಗಣಿತ ಭಾಷೆಯ ಪರೀಕ್ಷೆ ನಡೆದಿತ್ತು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಬಂದ ಬಳಿಕ ಪತ್ರಿಕೆ ಸೋರಿಕೆಯಾದ ವಿಚಾರ ತಿಳಿದಿದೆ. ಮೊರಟಗಿ ಪರೀಕ್ಷಾ ಕೇಂದ್ರಕ್ಕೆ ಬಿಇಓ ಆಗಮಿಸಿ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ.

ಸಿಂಧಗಿ ಪೊಲೀಸ್ ಠಾಣೆಗೆ ದೂರು ನೀಡುವ ಕುರಿತು ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

English summary
The question paper of maths was leaked on Whatsapp in Vijayapura, Karnataka. Maths exam held on Monday, March 25, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X