ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ: ಮೊದಲ ದಿನವೇ SSLC ಪ್ರಶ್ನೆ ಪತ್ರಿಕೆ ಬಹಿರಂಗ

By Manjunatha
|
Google Oneindia Kannada News

ವಿಜಯಪುರ, ಮಾರ್ಚ್ 23: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗದಂತಹಾ ಘಟನೆಗಳು ನಡೆಯಲಿಲ್ಲವೆಂದು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿ ಒಂದು ಗಂಟೆ ಕಳೆಯುವ ಮೊದಲೇ ಪ್ರಶ್ನೆ ಪತ್ರಿಕೆ ಹೊರ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆಯ ಚಿತ್ರಗಳು ಹರಿದಾಡುತ್ತಿದೆ.

ಮಾ.23ರಿಂದ ಏ.6ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಮಾ.23ರಿಂದ ಏ.6ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಯಾರೋ ವಿದ್ಯಾರ್ಥಿ ಪರೀಕ್ಷಾ ಕೊಠಡಿಗೆ ತೆರಳಿ ಪ್ರಶ್ನೆ ಪತ್ರಿಕೆ ಪಡೆದು ಕೆಲವೇ ಸಮಯದಲ್ಲಿ ವಾಪಾಸ್ಸಾಗಿ ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾನೆ ಎನ್ನಲಾಗಿದೆ.

SSLC question paper out in just one hour of exam

ಆದರೆ ಪರೀಕ್ಷೆ ಮುಗಿಯುವ ಅವಧಿಗೆ ಮುಂಚೆ ಹೊರ ಬರುವ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಕೊಠಡಿ ಮೇಲ್ವಿಚಾರಕರ ಬಳಿಯೇ ಬಿಟ್ಟು ಬರಬೇಕೆಂಬ ನಿಯಮವಿದ್ದರೂ ಸಹ ಹೇಗೆ ಈ ಪ್ರಶ್ನೆ ಪತ್ರಿಕೆ ಹೊರಬಂದಿದೆ ಎಂಬ ಅನುಮಾನ ಕಾಡುತ್ತಿದ್ದು, ಕೊಠಡಿ ಮೇಲ್ವಿಚಾರಕರ ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿದೆ ಎಂದು ಅನುಮಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: 10ಸಾವಿರ ವಿದ್ಯಾರ್ಥಿಗಳಿಗಿಲ್ಲ ಪ್ರವೇಶಎಸ್ಸೆಸ್ಸೆಲ್ಸಿ ಪರೀಕ್ಷೆ: 10ಸಾವಿರ ವಿದ್ಯಾರ್ಥಿಗಳಿಗಿಲ್ಲ ಪ್ರವೇಶ

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್‌ಎಸ್‌ಎಲ್‌ಸಿ ಬೋರ್ಡ್‌ ನಿರ್ದೇಶಕಿ ಸುಮಂಗಲಾ ಅವರು, ಯಾವುದೇ ವಿದ್ಯಾರ್ಥಿ ಅವಧಿಗೆ ಮುಂಚೆ ಪರೀಕ್ಷಾ ಕೊಠಡಿಯಿಂದ ನಿರ್ಗಮಿಸುವ ಮುಂಚೆ ಆತನ ಪ್ರಶ್ನೆ ಪತ್ರಿಕೆಯನ್ನು ಮೇಲ್ವಿಚಾರಕರು ಪಡೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ನಡೆದಿರುವ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತದೆ, ಕರ್ತವ್ಯಲೋಪ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

English summary
In Vijayapura some one leaks the SSLC first day question paper. SSLC director said that a student left the exam hall early by taking question paper and put it in the social media. She said board while inquire the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X