ಸುಮಲತಾ ಅಂಬರೀಶ್ ಬಿಜೆಪಿ ಸೇರ್ತಾರೆ ಎಂದ ರಮೇಶ್ ಜಿಗಜಿಣಗಿ
Recommended Video

ವಿಜಯಪುರ, ಮಾರ್ಚ್ 28: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಲಿದ್ದಾರೆ ಎಂದು ವಿಜಯಪುರ ಸಂಸದ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ ಎಂದರು.
ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಈ ಮೊದಲು ಸುಮಲತಾ ಅಂಬರೀಶ್ ಅವರು ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರೂ ಖುದ್ದು ಸುಮಲತಾ ಅವರನ್ನು ಭೇಟಿಯಾಗಿದ್ದರು.

ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯನ್ನಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದ್ದರಿಂದ, ಬಂಡಾಯವೆದ್ದ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.












Click it and Unblock the Notifications