ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಮಲತಾ ಅಂಬರೀಶ್ ಬಿಜೆಪಿ ಸೇರ್ತಾರೆ ಎಂದ ರಮೇಶ್ ಜಿಗಜಿಣಗಿ

|
Google Oneindia Kannada News

Recommended Video

Lok Sabha Elections 2019 : ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಬಿಜೆಪಿ ನಾಯಕ

ವಿಜಯಪುರ, ಮಾರ್ಚ್ 28: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಲಿದ್ದಾರೆ ಎಂದು ವಿಜಯಪುರ ಸಂಸದ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ ಎಂದರು.

ಐಟಿ ಅಧಿಕಾರಿಗಳೇನು ನಮ್ಮ ಮನೆಯ ಆಳುಗಳಾ? ಸುಮಲತಾ ಪ್ರಶ್ನೆಐಟಿ ಅಧಿಕಾರಿಗಳೇನು ನಮ್ಮ ಮನೆಯ ಆಳುಗಳಾ? ಸುಮಲತಾ ಪ್ರಶ್ನೆ

ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಈ ಮೊದಲು ಸುಮಲತಾ ಅಂಬರೀಶ್ ಅವರು ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರೂ ಖುದ್ದು ಸುಮಲತಾ ಅವರನ್ನು ಭೇಟಿಯಾಗಿದ್ದರು.

Sumalatha will join BJP: Ramesh Jigajinagi

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಚಿಹ್ನೆ ಯಾವುದು?ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಚಿಹ್ನೆ ಯಾವುದು?

ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯನ್ನಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದ್ದರಿಂದ, ಬಂಡಾಯವೆದ್ದ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.

English summary
Sumalatha Ambareesh will join BJP, union minister and BJP MP Ramesh Jigajinagi told
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X