ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಮೂವರ ಸಾವು, ಅನುಮಾನ!

ವಿಜಯಪುರ, ಅ. 03: ಎರಡು‌ ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿರುವ ಭೀಕರ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕಲಬುರಗಿ ಜಿಲ್ಲೆ ಅಫ್ಜಲಪುರ ಮೂಲದ ಬೈಕ್ ಸವಾರರು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್‌ ಗಳಿಗೆ ಬೆಂಕಿ ಹತ್ತಿಕೊಂಡು ಉರಿದಿವೆ. ಮೃತರನ್ನು ಕಲಬುರಗಿ ಜಿಲ್ಲೆಯ ಅಫ್ಜಲಪುರದ ಕುಮಾರ ಬಲಕುಂದಿ (22) ಎಂದು ಗುರುತಿಸಲಾಗಿದ್ದು, ಸಾವನ್ನಪ್ಪಿರುವ ಇನ್ನಿಬ್ಬರ ಹೆಸರು ಪತ್ತೆಯಾಗಿಲ್ಲ. ಮೃತ ಮೂವರಿಗೂ ತಲೆಗೆ ಮಾತ್ರ ಪೆಟ್ಟು ಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುವಂತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Three Killed In Bike Accident Near The Village Of Basavana Bagewadi Taluk In Vijayapura District

ಅಧಿಕ ಮಾಸದ ಶನಿವಾರ ಹಿನ್ನೆಲೆಯಲ್ಲಿ 6 ಜನ ಸ್ನೇಹಿತರು ಬೈಕ್‌ನಲ್ಲಿ ಕಲಬುರಗಿಯಿಂದ ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯನ ದರ್ಶನ ಪಡೆಯಲು ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ದಿಂಡವಾರ ಬಳಿ ಎದುರಿಗೆ ಬಂದಿದ್ದ ಇನ್ನೊಂದು ಬೈಕ್‌ಗೆ ಮುಖಾಮುಖ ಡಿಕ್ಕಿಯಾಗಿದೆ. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+