• search
 • Live TV
ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಜಯಪುರ; ಖ್ಯಾತ ವೈದ್ಯ ಎಂ. ಎಸ್. ಬಿರಾದಾರ ವಿಧಿವಶ

|
Google Oneindia Kannada News

ವಿಜಯಪುರ, ಮೇ 12; ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿ ಹಾಗೂ ವಿಜಯಪುರ ನಗರದ ಖ್ಯಾತ ವೈದ್ಯ ಡಾ. ಎಂ. ಎಸ್. ಬಿರಾದಾರ ಉಕ್ಕಲಿ (65) ಬುಧವಾರ ವಿಧಿವಶರಾದರು.

ಕೋವಿಡ್ ರೋಗಿಗಳ ಸೇವೆ ಮಾಡುತ್ತಿದ್ದ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಸೋಂಕಿನಿಂದ ಗುಣಮುಖಗೊಂಡಿದ್ದ ಅವರು ವಿಜಯಪುರದ ಮನೆಯಲ್ಲಿ ಹೋಂ ಕ್ವಾರೆಂಟೈನ್ ಆಗಿದ್ದರು.

 ವಿಜಯಪುರ: 2.70 ಲಕ್ಷ ಕಟ್ಟುವವರೆಗೂ ಶವ ನೀಡಲ್ಲ ಎಂದ ಆಸ್ಪತ್ರೆ ವಿರುದ್ಧ ಪ್ರತಿಭಟನೆ ವಿಜಯಪುರ: 2.70 ಲಕ್ಷ ಕಟ್ಟುವವರೆಗೂ ಶವ ನೀಡಲ್ಲ ಎಂದ ಆಸ್ಪತ್ರೆ ವಿರುದ್ಧ ಪ್ರತಿಭಟನೆ

ನಂತರ ತೀವ್ರ ಹೃದಯಾಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳವಾರ ಸೊಲ್ಹಾಪುರದಿಂದ ಏರ್ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಚಿತ್ರದುರ್ಗ: ಕೊರೊನಾ ಸೋಂಕಿಗೆ ಖಾಸಗಿ ಸುದ್ದಿ ವಾಹಿನಿ ಕ್ಯಾಮರಾಮನ್ ಸಾವುಚಿತ್ರದುರ್ಗ: ಕೊರೊನಾ ಸೋಂಕಿಗೆ ಖಾಸಗಿ ಸುದ್ದಿ ವಾಹಿನಿ ಕ್ಯಾಮರಾಮನ್ ಸಾವು

ಡಾ. ಎಂ. ಎಸ್. ಬಿರಾದಾರ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು. ಉಕ್ಕಲಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಬಿ.ಎಲ್.ಡಿ.ಇ ನ್ಯೂ ಇಂಗ್ಲಿಷ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದು, ಹುಬ್ಬಳಿಯ ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿನ್ನದ ಪದಕದೊಂದಿಗೆ ಎಂ.ಬಿ.ಬಿ.ಎಸ್ ಪದವಿ ಪೂರ್ಣಗೊಳಿಸಿದ್ದರು.

ಬಳ್ಳಾರಿಯಲ್ಲಿ ಎಂ.ಡಿ ಪದವಿಯನ್ನು ಪಡೆದು ಅದೇ ಜಿಲ್ಲೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದರು. 1984 ರಿಂದ 1991ರವರೆಗೆ ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಾ, ಈ ಭಾಗದಲ್ಲಿ ಖ್ಯಾತಿ ಪಡೆದಿದ್ದರು.

ಗೋವಾದ ಸರ್ಕಾರಿ ಆಸ್ಪತ್ರೆಯಲ್ಲಿ 26 ಕೊರೊನಾ ಸೋಂಕಿತರ ಸಾವು ಗೋವಾದ ಸರ್ಕಾರಿ ಆಸ್ಪತ್ರೆಯಲ್ಲಿ 26 ಕೊರೊನಾ ಸೋಂಕಿತರ ಸಾವು

1991ರಿಂದ ಬಿ. ಎಂ. ಪಾಟೀಲ್ ವೈದ್ಯಕೀಯ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಆರಂಭಿಸಿದ ಇವರು ಸುಧೀರ್ಘ 30 ವರ್ಷಗಳ ಕಾಲ ಬಿ.ಎಲ್.ಡಿ.ಇ ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ್ದರು. 2016ರಿಂದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಗೋಧಾವರಿ, ಪುತ್ರಿ ಡಾ. ಅರುಣಾ ಹಾಗೂ ಅಶ್ವಿನಿ, ಇಬ್ಬರು ಅಳಿಯಂದಿರು, ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಗುರುವಾರ ಸ್ವಗ್ರಾಮ ಉಕ್ಕಲಿಯ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

   ಸಾಕೋ ಯೋಗ್ಯತೆ ಇಲ್ಲಾ ಅಂದ್ರೆ ನಿಮ್ಮ ತಂದೆ ತಾಯಿನ ನಾನು ನೋಡ್ಕೋತೀನಿ | Oneindia Kannada

   ಎಂ. ಬಿ. ಪಾಟೀಲ್ ಸಂತಾಪ; "ಶ್ರೇಷ್ಠ ವೈದ್ಯರಾಗಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುರುಗಳಾಗಿ ಮತ್ತು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಅಪರೂಪದ ಮಾನವೀಯ ಮೌಲ್ಯಗಳನ್ನು, ಅಂತಃಕರಣ ಹೊಂದಿದ್ದ ಡಾ. ಎಂ. ಎಸ್. ಬಿರಾದಾರ ಅಗಲಿಕೆ ವೈಯಕ್ತಿಕವಾಗಿ ನನಗೆ ಅತೀವ ನೋವು ತಂದಿದೆ" ಎಂದು ಮಾಜಿ ಸಚಿವ, ಬಿ.ಎಲ್.ಡಿ.ಇ ಅಧ್ಯಕ್ಷ ಎಂ.ಬಿ.ಪಾಟೀಲ್ ಸಂತಾಪ ಸೂಚಿಸಿದ್ದಾರೆ.

   English summary
   Vice chancellor of BLDE university and prof of medicine of Dr. M. S. Biradar no more. He died in private hospital in Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X