ಕರ್ನಾಟಕದ ಈ ವಿಮಾನ ನಿಲ್ದಾಣ ಉದ್ಘಾಟನೆ ಇನ್ನಷ್ಟು ವಿಳಂಬ
ವಿಜಯಪುರ, ಫೆಬ್ರವರಿ 03: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೊಂಡು ವಿಮಾನಗಳು ಸಂಚಾರ ನಡೆಸುತ್ತಿವೆ. ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಚರ್ಚೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣ ಮಾಡಬೇಕು? ಎಂದು ಸ್ಥಳವನ್ನು ಅಂತಿಮಗೊಳಿಸಲಾಗುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಂಡಿರುವ ಕರ್ನಾಟಕದ ವಿಮಾನ ನಿಲ್ದಾಣವೊಂದರ ಉದ್ಘಾಟನೆ ಇನ್ನಷ್ಟು ವಿಳಂಬವಾಗಲಿದೆ. 2021ರ ಫೆಬ್ರವರಿಯಲ್ಲಿ ಈ ವಿಮಾನ ನಿಲ್ದಾಣ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು.
ಉತ್ತರ ಕರ್ನಾಟಕ ಭಾಗಕ್ಕೆ ಮತ್ತೊಂದು ವಿಮಾನ ನಿಲ್ದಾಣ ಸಿಗಲಿದೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜಾಗಿದೆ. ಆದರೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂಕೋರ್ಟ್ ಮೊರೆ ಹೋಗಿರುವ ಕಾರಣ ನಿಲ್ದಾಣದ ಉದ್ಘಾಟನೆ ಇನ್ನೂ ಮೂರು ತಿಂಗಳು ವಿಳಂಬವಾಗಲಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕ ಸರ್ಕಾರ ಈಗಾಗಲೇ ಈ ವಿಮಾನ ನಿಲ್ದಾಣಕ್ಕೆ 'ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ' ಎಂದು ನಾಮಕರಣ ಮಾಡಲು ಸಹ ಒಪ್ಪಿಗೆ ನೀಡಿದೆ.

ಬಿ. ಎಸ್. ಯಡಿಯೂರಪ್ಪ 2008ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ವಿಜಯಪುರ ವಿಮಾನ ನಿಲ್ದಾಣದ ಕನಸಿಗೆ ರೆಕ್ಕೆ ಬಂದಿತು. ಯೋಜನೆಗಾಗಿ ಅವರು ವಿಜಯಪುರ ತಾಲೂಕಿನ ಮದಭಾವಿ ಬಳಿ ಭೂಮಿಪೂಜೆ ಮಾಡಿದ್ದರು. ರೈತರ 379.08 ಎಕರೆ, ಸರ್ಕಾರದ 47.33 ಎಕರೆ ಜಮೀನು ಸೇರಿ ಒಟ್ಟು 727.01 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಯೋಜನೆ ರೂಪಿಸಲಾಗಿತ್ತು. ಆದರೆ ಕಾಮಗಾರಿ ಆರಂಭವಾಗಲೇ ಇಲ್ಲ.
2021ರ ಫೆಬ್ರವರಿಯಲ್ಲಿ ಯಡಿಯೂರಪ್ಪ ಮತ್ತೆ ಸಿಎಂ ಆಗಿದ್ದಾಗ ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಿವಮೊಗ್ಗದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕು ಸ್ಥಾಪನೆ ಮಾಡಿದ್ದರು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿ ಪ್ರಧಾನಿ ನರೇಂದ್ರ ಮೋದಿ 27/2/2023ರಂದು ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ್ದಾರೆ. ಆದರೆ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ ಯಾವಾಗ? ಎಂಬುದು ಜನರ ಪ್ರಶ್ನೆ.
ಸುಪ್ರೀಂಕೋರ್ಟ್‌ಗೆ ಅರ್ಜಿ: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹಸಿರು ಪೀಠದಿಂದ ಅನುಮತಿ ಪಡೆದಿಲ್ಲ ಎಂದು ಬೆಂಗಳೂರು ಮೂಲದ ಎನ್‌ಜಿಒ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಆದ್ದರಿಂದ ಇನ್ನೂ 2-3 ತಿಂಗಳ ಬಳಿಕ ಎಲ್ಲಾ ಒಪ್ಪಿಗೆಯನ್ನು ಪಡೆದು ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಾಗುತ್ತದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳ ತಂಡ ಈಗಾಗಲೇ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಫೈರ್ ಫೈಟರ್ಸ್ ವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಇದರ ವ್ಯವಸ್ಥೆಯನ್ನು ಸರ್ಕಾರ ಮಾಡಲಿದೆ. ಆದರೆ ಕೋರ್ಟ್ ಒಪ್ಪಿಗೆ ಸಿಗುವ ತನಕ ನಿಲ್ದಾಣ ಉದ್ಘಾಟನೆ ಆಗುವುದಿಲ್ಲ.
ವಿಮಾನ ನಿಲ್ದಾಣಕ್ಕೆ ಶಂಕು ಸ್ಥಾಪನೆ ಮಾಡಿ ಮಾತನಾಡಿದ್ದ ಬಿ. ಎಸ್. ಯಡಿಯೂರಪ್ಪ, "ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗವಕಾಶ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಸಂಪರ್ಕ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿಯಾಗಲಿದೆ" ಎಂದು ಹೇಳಿದ್ದರು.
ಯೋಜನೆ ಆರಂಭ ಮಾಡುವಾಗ ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂಪಾಯಿ ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿತ್ತು, ಕಾಮಗಾರಿ ಆರಂಭಿಸಲಾಗಿತ್ತು. ನಂತರ 125 ಕೋಟಿ ರೂ. ಹೆಚ್ಚುವರಿ ವೆಚ್ಚದಲ್ಲಿ ಏರ್ ಬಸ್, ಕಾರ್ಗೋ ವಿಮಾನಗಳ ಸೇವೆಯೂ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಈಗ ರನ್‍ವೇ, ಎಸಿಟಿ, ಟ್ಯಾಕ್ಸಿ ವೇ, ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, ಸಂಪರ್ಕ ರಸ್ತೆಗಳ ಕಾಮಗಾರಿ ಮುಕ್ತಾಯಗೊಂಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications