ವಿಜಯಪುರ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ವಿಜಯಪುರ, ಜನವರಿ 18: ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ವಿಜಯಪುರ ಬಿಜೆಪಿ ವತಿಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ತಡವಲಗಾ ಗ್ರಾಮದಿಂದ ಇಂಡಿ ಪಟ್ಟಣದವರೆಗೆ ನಡೆಯುತ್ತಿರುವ ಪಾದಯಾತ್ರೆ 12 ಕಿ.ಮೀ ದೂರ ಪಾದಯಾತ್ರೆ ಹೊರಟಿದೆ. ಪಾದಯಾತ್ರೆಯಲ್ಲಿ ಇಂಡಿ ಮಡಲದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ.
ಕಾಲುವೆಗೆ ನೀರು ಹರಿಸುವುದು, ನೀರಾವರಿ ಯೋಜನೆಯಲ್ಲಿ ಭೂಸ್ವಾಧೀನ ಪಡಿಸಿಕೊಂಡ ರೈತರಿಗೆ ಪರಿಹಾರ ಇನ್ನೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಮಾಡಲಾಗುತ್ತಿದೆ.

ಯಾತ್ರೆಯ ಉದ್ದಕ್ಕೂ ರಾಜ್ಯಸರ್ಕಾರ ಹಾಗೂ ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications