• search
  • Live TV
ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: 17 ವಾರ್ಡ್‌ಗಳಲ್ಲಿ ಬಿಜೆಪಿಗೆ ಗೆಲುವು

|
Google Oneindia Kannada News

ವಿಜಯಪುರ, ಅಕ್ಟೋಬರ್‌ 31: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, 35 ವಾರ್ಡ್‌ಗಳಲ್ಲಿ 17 ವಾರ್ಡ್‌ಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಎಣಿಕೆ ಅಂತಿಮವಾಗಿದ್ದು, ಫಲಿತಾಂಶ ಪ್ರಕಟಗೊಂಡಿದೆ. 35 ವಾರ್ಡಗಳಿಗೆ ನಡೆದ ಚುನಾವಣೆಯಲ್ಲಿ 17 ವಾರ್ಡ್‌ಗಳಲ್ಲಿ ಬಿಜೆಪಿ , 10 ವಾರ್ಡ್‌ಗಳಲ್ಲಿ ಕಾಂಗ್ರೆಸ್, 1 ವಾರ್ಡ್‌ಗಳಲ್ಲಿ ಜೆಡಿಎಸ್, 2 ವಾರ್ಡ್‌ಗಳಲ್ಲಿ ಎಂಐಎಂ, 5 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು 18 ಸಂಖ್ಯಾ ಬಲ ಬೇಕಾಗಿದ್ದು, ಬಿಜೆಪಿ 17 ವಾರ್ಡಗಳಲ್ಲಿ ಈಗಾಗಲೇ ಗೆಲುವು ಸಾಧಿಸಿದೆ. ಹೀಗಾಗಿ ಬಹುಮತ ಪಡೆಯಲು ಬಿಜೆಪಿಗೆ ಬೇಕಿದೆ 1 ಅಭ್ಯರ್ಥಿ ಬೆಂಬಲ ಬೇಕಿದೆ. ಹೆಚ್ಚಿನ ವಾರ್ಡ್‌ಗಳಲ್ಲಿ ಗೆಲವು ಸಾಧಿಸಿ ಬಹುಮತಕ್ಕೆ ಹತ್ತಿರ ಇರುವ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಇನ್ನು ಗೆಲವು ಸಾಧಿಸಿದ ಅಭ್ಯರ್ಥಿಗಳ ಬೆಂಬಲಿಗರು, ಬಣ್ಣ ಎರಚಿ, ಮೆರವಣಿಗೆ ನಡೆಸಿ ಸಂಭ್ರಮಿಸಿದ್ದಾರೆ.

ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಅಕ್ಟೋಬರ್‌ 28 ರಂದು ನಡೆದಿತ್ತು. ಒಟ್ಟು 174 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದರು. 35 ವಾರ್ಡ್‌ಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು, ಮುಸ್ಲಿಂ ಮತದಾರರು ಹೆಚ್ಚಾಗಿರುವ 20 ಹಾಗೂ 27ನೇ ವಾರ್ಡ್‌ನಲ್ಲಿ ಬಿಜೆಪಿ ಸ್ಪರ್ಧಿಸಿರಲಿಲ್ಲ. ಕಾಂಗ್ರೆಸ್‌ ಎಲ್ಲಾ 35 ಕ್ಷೇತ್ರಗಳಲ್ಲೂ ಜೆಡಿಎಸ್‌ 20, ಎಎಪಿ 15, ಎಐಎಂಐಎಂ 4, ಜನತಾ ಪಕ್ಷ 3, ಕೆಆರ್‌ಎಸ್‌ 3 ಸ್ಥಾನ, ಎಸ್‌ಡಿಪಿಐ 2 ಹಾಗೂ ಬಿಎಸ್‌ಪಿ 1ರಲ್ಲಿ ಹಾಗೂ 58 ಅಭ್ಯರ್ಥಿಗಳು ಪಕ್ಷೇತರರಾಗಿ ಸ್ಪರ್ಧಿಸಿದ್ದರು.

Vijayapura City Municipal Corporation Election Results

ಇಂದು ಮುಂಜಾನೆಯಿಂದಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, 35 ಮತ ಏಣಿಕೆ ಮೇಲ್ವಿಚಾರಕರು, 35 ಮತ ಏಣಿಕೆ ಸಹಾಯಕರು, 07 ಮತ ಎಣಿಕೆ ಡಾಟಾ ಎಂಟ್ರಿ ಮೇಲ್ವಿಚಾರಕರು ಹಾಗೂ ಇತರ ಕಾರ್ಯಗಳಿಗೆ 60 ಜನರು ಸೇರಿದಂತೆ ಒಟ್ಟು 179 ಜನರನ್ನು ಮತ ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಲಾಗಿತ್ತು.

English summary
Vijayapura City Municipal Corporation Election Results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X