ವಿಜಯಪುರ: ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ಭಿನ್ನಮತ ಸ್ಫೋಟ?!

By: ವಿಜಯಪುರ ಪ್ರತಿನಿಧಿ
Subscribe to Oneindia Kannada

ವಿಜಯಪುರ, ನವೆಂಬರ್ 30: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತ ಸ್ಫೋಟವಾಗಿದೆಯಾ? ಹೌದು ಎನ್ನುತ್ತವೆ ಬಿಜೆಪಿ ಮೂಲಗಳು.

ಪರಿವರ್ತನಾ ಯಾತ್ರೆ : 17ದಿನದಲ್ಲಿ ಬಿಜೆಪಿ ಸಾಧಿಸಿದ್ದೇನು?

2018 ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕ ಬಿಜೆಪಿ ಆರಂಭಿಸಿರುವ ನವಕರ್ನಾಟಕ ಪರಿವರ್ತನಾ ಯಾತ್ರೆ ಇಂದು(ನ.30) ವಿಜಯಪುರ ನಗರ, ಬಸವನ ಬಾಗೇವಾಡಿ, ದೇವರ ಹಿಪ್ಪರಿಗೆಯಲ್ಲಿ ಪ್ರಚಾರ ಸಭೆ ನಡೆಸಲಿದೆ.

Vijayapura: Internal conflict between BJP leaders in Parivartana rally?

ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದ ಸಭೆಯೊಂದರಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗರಾಜ ದೇಸಾಯಿ, ತಮ್ಮ ಮಾತಿನ ನಡುವೆ ಎಲ್ಲೂ ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಹೆಸರು ಹೇಳಲಿಲ್ಲ ಎಂಬ ಕಾರಣಕ್ಕೆ ಬೆಳ್ಳುಬ್ಬಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಲ್ಲಿ ನಾನು ಯಾರ ಪರವಾಗಿಯೂ ಪ್ರಚಾರಕ್ಕೆ ಬಂದಿಲ್ಲ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗದಿದ್ದರೆ ಕಾರ್ಯಕ್ರಮ ರದ್ದು ಪಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದ ಮೇಲೆ ಕಾರ್ಯಕರ್ತರು ಸುಮ್ಮನಾದರು.

ನಂತರ ಮಾತನಾಡಿದ ಬೆಳ್ಳುಬ್ಬಿ ತಮ್ಮ ಹೆಸರು ಪ್ರಸ್ತಾಪಿಸದ ಸಂಗರಾಜ ದೇಸಾಯಿ ವಿರುದ್ಧ ಮಾತಿನ ಚಟಾಕಿ ಬೀಸಿದರು. ಯಡಿಯೂರಪ್ಪ ಎಚ್ಚರಿಕೆ ನೆನಪಾಗಿ, ನಂತರ ಅವರ ಕ್ಷಮೆ ಕೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Some internal conflicts between BJP leaders in Parivartana rally in Vijayapura came into notice today(Nov 30th). After B.S.Yeddyurappa's intermediation situation came under control.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ