ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ-ಉತ್ತರ ಕರ್ನಾಟಕ ಸಂಪರ್ಕಿಸುವ ರೈಲಿಗೆ ಇಂದು ಚಾಲನೆ

|
Google Oneindia Kannada News

ವಿಜಯಪುರ, ನವೆಂಬರ್ 11 : ವಿಜಯಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲಿಗೆ ಸೋಮವಾರ ಚಾಲನೆ ಸಿಗಲಿದೆ. ಮೀಟರ್ ಗೇಜ್ ಕಾಲದಲ್ಲಿ ಹುಬ್ಬಳ್ಳಿ-ಮಂಗಳೂರು ನಡುವೆ ರೈಲು ಸಂಚಾರ ನಡೆಸುತ್ತಿತ್ತು.

ಸೋಮವಾರ ಸಂಜೆ 6 ಗಂಟೆಗೆ ವಿಜಯಪುರದಿಂದ ವಿಶೇಷ ಎಕ್ಸ್‌ಪ್ರೆಸ್ ರೈಲು ಹೊರಡಲಿದ್ದು, ಮಂಗಳವಾರ ಮಧ್ಯಾಹ್ನ 12.40ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣವನ್ನು ತಲುಪಲಿದೆ. ಉಭಯ ನಗರಗಳ ನಡುವೆ 06919/06920 ನಂಬರ್ ರೈಲು ಸಂಚಾರ ನಡೆಸಲಿದೆ.

ವಿಜಯಪುರ-ಬೆಂಗಳೂರು ರೈಲಿಗೆ ಚಾಲನೆ, ನಿಲ್ದಾಣಗಳು ವಿಜಯಪುರ-ಬೆಂಗಳೂರು ರೈಲಿಗೆ ಚಾಲನೆ, ನಿಲ್ದಾಣಗಳು

ವಿಜಯಪುರದಿಂದ ಹೊರಡುವ ರೈಲು ಬಸವನಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಬಾದಾಮಿ, ಗದಗ, ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಅರಸೀಕರೆ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ, ಪಡೀಲ್ ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿದೆ.

ಬೆಂಗಳೂರು-ಹುಬ್ಬಳ್ಳಿ ನಡುವೆ ಹೊಸ ರೈಲು; 5 ಗಂಟೆಯಲ್ಲಿ ಪ್ರಯಾಣ ಬೆಂಗಳೂರು-ಹುಬ್ಬಳ್ಳಿ ನಡುವೆ ಹೊಸ ರೈಲು; 5 ಗಂಟೆಯಲ್ಲಿ ಪ್ರಯಾಣ

Vijayapura-Mangaluru train

ಈ ರೈಲು ದಕ್ಷಿಣ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಹುಬ್ಬಳ್ಳಿ-ಮಂಗಳೂರು ನಡುವೆ ಮೀಟರ್ ಗೇಜ್ ಕಾಲದಲ್ಲಿ ರೈಲು ಸಂಚಾರ ನಡೆಸುತ್ತಿತ್ತು. ಈ ರೈಲನ್ನು ಪುನಃ ಆರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ಮನವಿ ಸಲ್ಲಿಸಲಾಗಿತ್ತು.

ಶಿವಮೊಗ್ಗದಿಂದ 3 ಹೊಸ ರೈಲು; ವೇಳಾಪಟ್ಟಿ, ನಿಲ್ದಾಣ ಶಿವಮೊಗ್ಗದಿಂದ 3 ಹೊಸ ರೈಲು; ವೇಳಾಪಟ್ಟಿ, ನಿಲ್ದಾಣ

ಪ್ರತಿದಿನ ಮಂಗಳೂರು-ವಿಜಯಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ. ಜನರ ಪ್ರತಿಕ್ರಿಯೆ ನೋಡಿಕೊಂಡು ರೈಲನ್ನು ಖಾಯಂಗೊಳಿಸುವ ಕುರಿತು ಇಲಾಖೆ ತೀರ್ಮಾನ ತೆಗೆದುಕೊಳ್ಳಲಿದೆ.

ವೇಳಾಪಟ್ಟಿ

* ಪ್ರತಿದಿನ ಸಂಜೆ 6 ಗಂಟೆಗೆ ವಿಜಯಪುರ ನಿಲ್ದಾಣದಿಂದ ರೈಲು ಹೊರಡಲಿದ್ದು, ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

* ಮಂಗಳೂರು ರೈಲು ನಿಲ್ದಾಣದಿಂದ ಸಂಜೆ 6.30ಕ್ಕೆ ರೈಲು ಹೊರಡಲಿದ್ದು, ಮರುದಿನ ಬೆಳಗ್ಗೆ 11.45ಕ್ಕೆ ವಿಜಯಪುರವನ್ನು ತಲುಪಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

14 ಬೋಗಿಗಳ ಈ ರೈಲಿನಲ್ಲಿ ಒಂದು ಎಸಿ 2 ಟೈರ್ ಕೋಚ್, ಒಂದು ಎಸಿ 3 ಟೈರ್ ಕೋಚ್, 6 ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚ್, 4 ಜನರಲ್ ಸೆಕೆಂಡ್ ಕ್ಲಾಸ್ ಕೋಚ್ ಹಾಗೂ ಎರಡು ಸೆಕೆಂಡ್ ಕ್ಲಾಸ್ ಲಗೇಜ್ ಕಂ ಬ್ರೇಕ್ ವ್ಯಾನ್‌ ಇರುತ್ತದೆ.

English summary
Vijayapura and Mangaluru Junction train service from November 11, 2019. South western railway announced new daily special express train that connects South and North Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X