ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಮತದಾರರ ಕೈಯಲ್ಲಿ 174 ಅಭ್ಯರ್ಥಿಗಳ ಭವಿಷ್ಯ

|
Google Oneindia Kannada News

ವಿಜಯಪುರ, ಅಕ್ಟೋಬರ್‌ 28: ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಇಂದು ನಡೆಯುತ್ತಿದ್ದು, 174 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಣಯವಾಗಲಿದೆ.

ಇಂದು ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಜೊತೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮಪಂಚಾಯಿತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸ್ಥಾನಗಳಿಗೂ ಇಂದು(ಅಕ್ಟೋಬರ್‌ 28) ಮತದಾನ ನಡೆಯುತ್ತಿದೆ.

Breaking: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಬಿರುಸಿನ ಸಿದ್ಧತೆ, 174 ಅಭ್ಯರ್ಥಿಗಳ ಭವಿಷ್ಯ ತೀರ್ಮಾನBreaking: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಬಿರುಸಿನ ಸಿದ್ಧತೆ, 174 ಅಭ್ಯರ್ಥಿಗಳ ಭವಿಷ್ಯ ತೀರ್ಮಾನ

ಪಾಲಿಕೆ ಚುನಾವಣೆಗಾಗಿ ಮತದಾನಕ್ಕೆ ಮತಗಟ್ಟೆಗಳನ್ನು ಸ್ಥಾಪಿಸಿರುವ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಾಲೆಗಳಿಗಲ್ಲದೆ ಪಾಲಿಕೆ ವ್ಯಾಪ್ತಿಯಲ್ಲಿನ ಸರಕಾರಿ ಕಚೇರಿ, ಸರಕಾರಿ ಸಂಸ್ಥೆಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳಿಗೆ, ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅರ್ಹ ಮತದಾನ ನೌಕರರಿಗೆ ಇಂದು (ಅಕ್ಟೋಬರ್ 28)ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

Voting begin Vijayapura Municipal Corporation Elections

ಮತದಾನಕ್ಕಾಗಿ ಒಟ್ಟು 303 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇನ್ನು ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಒಟ್ಟು 35 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದ್ದು, ಒಟ್ಟು 174 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಈ ಪೈಕಿ ಬಿಜೆಪಿ 33 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್‌ ಸಂಪೂರ್ಣ 35 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿದೆ. ಇನ್ನು ಜೆಡಿಎಸ್‌ 20 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿದೆ.

ಭಾರತದ ಅನ್ನ ತಿಂದು ಪಾಕ್‌ ಪರ ಮಾತನಾಡುವವರನ್ನ ಬಿಜೆಪಿ ವಿರೋಧಿಸುತ್ತದೆ : ಓವೈಸಿಗೆ ಯತ್ನಾಳ್ ತಿರುಗೇಟುಭಾರತದ ಅನ್ನ ತಿಂದು ಪಾಕ್‌ ಪರ ಮಾತನಾಡುವವರನ್ನ ಬಿಜೆಪಿ ವಿರೋಧಿಸುತ್ತದೆ : ಓವೈಸಿಗೆ ಯತ್ನಾಳ್ ತಿರುಗೇಟು

303 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದೆ. ಈ ಮತಗಟ್ಟೆಗಳ ಪೈಕಿ 48 ಅತೀ ಸೂಕ್ಷ್ಮ, 83 ಸೂಕ್ಷ್ಮ, 172 ಸಾಧಾರಣ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. 1,46,736 ಪುರುಷರು, 1,47,327 ಮಹಿಳೆಯರು ಹಾಗೂ 110 ಇತರೆ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಇನ್ನು ಅಕ್ಟೋಬರ್‌ 31ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

English summary
Voting started today (Oct 28) for Vijayapura Municipal Corporation Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X