Breaking: ವಿಜಯಪುರ ಪಾಲಿಕೆಗೆ ಅ.28ರಂದು ಚುನಾವಣೆ

ವಿಜಯಪುರ, ಅಕ್ಟೋಬರ್ 04: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರದ ಸ್ಥಳಿಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಗೆ ಖಾಲಿ ಇರುವ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ.

ಸೋಮವಾರ ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 28ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ರವರೆಗೆ ಚುನಾವಣೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಕುರಿತು ಆ ಭಾಗದ ಜಿಲ್ಲಾಧಿಕಾರಿಗಳು 2022ರ ಅಕ್ಟೋಬರ್ 13ರಂದು ಅಧಿಸೂಚನೆ ಹೊರಡಿಸಲಿದೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ ಅಭ್ಯರ್ಥಿಗಳು ಅಕ್ಟೋಬರ್ 18ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮರುದಿನ ಅಕ್ಟೋಬರ್ 19ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೆಯ ದಿನಾಂಕ ನಿಗದಿ ಮಾಡಲಾಗಿದೆ.

Vvijayapura Metropolitan Corporation Election on Oct. 28th

ಮತದಾನವು ಅಕ್ಟೋಬರ್ 28ಕ್ಕೆ ನಡೆದರೆ, ಮರು ಮತದಾನವನ್ನು ಅಗತ್ಯಬಿದ್ದಲ್ಲಿ ಮಾತ್ರವೇ ಅಕ್ಟೋಬರ್ 30ರಂದು ನಡೆಸಲಾಗುವುದು. ಮರು ದಿನ ಅಂದರೆ ಅಕ್ಟೋಬರ್ 31ರಂದು ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದೆ.

ಜಿಲ್ಲಾಧಿಕಾರಿಗಳಿಗೆ ಸೂಚನೆ
ರಾಜ್ಯ ಚುನಾವಣಾ ಆಯೋಗವು ಹೊರಡಿಸಿದ ವೇಳಾಪಟ್ಟಿಯಂತೆ ಜಿಲ್ಲಾಧಿಕಾರಿಗಳು ಅನುಸರಿಸಬೇಕು. ಅಲ್ಲದೇ ಕರ್ನಾಟಕ ಪೌರ ನಿಗಮಗಳ (ಚುನಾವಣೆ) ನಿಯಮಗಳು, 1979ರ ನಿಯಮ 10 ಮತ್ತು ಕರ್ನಾಟಕ ಪೌರಸಭೆಗಳ ನಿಯಮಗಳು 1977ರ ನಿಯಮ 8ರ ಪ್ರಕಾರ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾವಣೆ ಅಧಿಸೂಚನೆಯನ್ನು ಪ್ರಪತ್ರದ ಮೂಲಕ ಹೊರಡಿಸಬೇಕು ಎಂದು ಆಯೋಗವು ಸೂಚಿಸಿದೆ.

ಕರ್ನಾಟಕ ರಾಜ್ಯ ಚುನಾವಣೆ ಆಯೋಗವು ಸೋಮವಾರದಂದೆ ರಾಜ್ಯದ 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಇದೇ ತಿಂಗಳಾಂತ್ಯಕ್ಕೆ ವಿವಿಧ ಚುನಾವಣೆಗಳನ್ನು ನಡೆಸಲು ಆಯೋಗವು ತೀರ್ಮಾನಿಸಿದ್ದು, ಆ ಬಗ್ಗೆ ಅಧಿಸೂಚನೆ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+