ಕರ್ನಾಟಕದ ಈ ಭಾಗದಲ್ಲಿ ಭೂಮಿಗೆ ಬಂಪರ್ ಬೆಲೆ, ಕಾರಣವೇನು ?
ಕರ್ನಾಟಕದ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಬಂಪರ್ ಬಂದಿದೆ. ದಕ್ಷಿಣ ಕರ್ನಾಟಕ ಭಾಗ ಹಾಗೂ ಉತ್ತರ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ವಿವಿಧ ಕಾರಣಗಳಿಗೆ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಇದೀಗ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಧಮಾಕ ಬಂದಿದೆ. ಉತ್ತರದ ಯಾವ ಭಾಗದಲ್ಲಿ ರಿಯಲ್ ಎಸ್ಟೇಟ್ ಚಿಗುರಿದೆ ಹಾಗೂ ಯಾವ ಕಾರಣಕ್ಕೆ ಎನ್ನುವ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.
ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಬಂಪರ್ ಬೆಲೆ ಬರುತ್ತಿದೆ. ಇದಕ್ಕೆ ಹಲವು ಕಾರಣಗಳು ಇವೆ. ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮೆಟ್ರೋ ಸೇರಿದಂತೆ ವಿವಿಧ ಕಾರಣಗಳಿಗೆ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ರಿಯಲ್ ಎಸ್ಟೇಟ್‌ಗೆ ಒಳ್ಳೆಯ ಆಫರ್ ಬಂದಿದೆ. ಇದೀಗ ಹುಬ್ಬಳ್ಳಿ - ಬೆಳಗಾವಿಯಲ್ಲೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಚಿಂತನೆ ಇದೆ ಎಂದು ಹೇಳಿದ ಮೇಲೆ ಈ ಭಾಗದಲ್ಲೂ ರಿಯಲ್ ಎಸ್ಟೇಟ್ ಚಿಗುರುಕೊಂಡಿದೆ. ಇದೀಗ ವಿಜಯಪುರ ಭಾಗದಲ್ಲೂ ರಿಯಲ್ ಎಸ್ಟೇಟ್ ಬೂಮ್ ಆಗಿದ್ದು. ಆಸ್ತಿ, ಮನೆ, ಫ್ಲ್ಯಾಟ್ ಹಾಗೂ ಮನೆಗಳಿಗೆ ಬಂಪರ್ ಬೆಲೆ ಬರುತ್ತಿದೆ. ಅದೇನು ಎನ್ನುವ ವಿವರ ನೋಡೋಣ..

ಉತ್ತರ ಕರ್ನಾಟಕದ ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಒಳ್ಳೆಯ ಕಾಲ ಬಂದಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಗೆ ಕಾಲ ಕೂಡಿ ಬಂದಿದ್ದು. ಈ ಭಾಗದಲ್ಲಿ ಆಸ್ತಿಗೆ ಬಂಪರ್ ಬಂದಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಪರಿಸರ ಇಲಾಖೆಯ ಅನುಮತಿ ಸಂಬಂಧ ಪ್ರಕರಣವೊಂದು ಬಾಕಿ ಉಳಿದಿದೆ. ಇದನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಿ ಈ ಭಾಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡುವುದಾಗಿ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ಉತ್ತರ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಧಮಾಕ: ಇಲ್ಲಿಯ ವರೆಗೆ ಬೆಂಗಳೂರು ಹಾಗೂ ಬೆಂಗಳೂರು ಕೇಂದ್ರಿತವಾಗಿ ರಿಯಲ್ ಎಸ್ಟೇಟ್‌ನ ಬಗ್ಗೆ ಚರ್ಚೆಯಾಗುತ್ತಿತ್ತು. ಇದೀಗ ಉತ್ತರ ಕರ್ನಾಟಕ ಭಾಗದಲ್ಲೂ ರಿಯಲ್ ಎಸ್ಟೇಟ್‌ಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ಬೀದರ್ ಹಾಗೂ ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಉದ್ಘಾಟನೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಬೆಳವಣಿಗೆಗಳು ನಡೆದಿವೆ.
ಇದೆಲ್ಲವೂ ಈ ಭಾಗದಲ್ಲಿ ರಿಯಲ್ ಎಸ್ಟೇಟ್ ಅಭಿವೃದ್ಧಿ ಆಗುವುದಕ್ಕೆ ಕಾರಣವಾಗಿದೆ. ಇದರೊಂದಿಗೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚರ್ಚೆಯಾದಾಗಿನಿಂದಲೂ ಉತ್ತರ ಕರ್ನಾಟಕದಲ್ಲೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಅಭಿವೃದ್ಧಿಯಾಗಬೇಕು ಎಂದು ಒತ್ತಾಯಗಳು ಕೇಳಿ ಬಂದಿದ್ದವು.
ಇದೀಗ ಉತ್ತರ ಕರ್ನಾಟಕ ಭಾಗದಲ್ಲೂ ಒಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವುದಾಗಿ ರಾಜ್ಯ ಸರ್ಕಾರವು ಹೇಳಿದೆ. ಈ ಬೆಳವಣಿಗೆಯೂ ಉತ್ತರ ಕರ್ನಾಟಕದ ಹುಬ್ಬಳ್ಳಿ - ಬೆಳಗಾವಿ ಭಾಗದಲ್ಲಿ ಭೂಮಿ ಮಾರಾಟ ಬೆಲೆ ಹೆಚ್ಚಳವಾಗುವುದಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಉತ್ತರ ಕರ್ನಾಟಕಕ್ಕೂ ಬಂಪರ್: ಆಸ್ತಿ ಹಾಗೂ ರಿಯಲ್ ಎಸ್ಟೇಟ್ ವಿಚಾರದಲ್ಲಿ ವಿವಿಧ ಕಾರಣಕ್ಕೆ ಬೆಂಗಳೂರು ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಾತ್ರ ಬೆಳವಣಿಗೆ ಆಗುತ್ತಿತ್ತು. ಇದೀಗ ಉತ್ತರ ಕರ್ನಾಟಕ ಭಾಗದಲ್ಲೂ ವಿವಿಧ ಕಾರಣಕ್ಕೆ ಭೂಮಿಗೆ ಬಂಗಾರದ ಬೆಲೆ ಬರುವುದಕ್ಕೆ ಕಾರಣವಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications