• search
  • Live TV
ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

''ಕುಮಾರಸ್ವಾಮಿ ಸಿಎಂ ಆಗಿದ್ದೇ ಅಣಕು ಪ್ರದರ್ಶನದಂತಿತ್ತು''

|

ವಿಜಯಪುರ, ಜನವರಿ 22: 'ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದು ಒಂದು ಅಣಕು ಪ್ರದರ್ಶನದಂತಿತ್ತು' ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ''ದೇಶದ ಭದ್ರತೆ ಹಾಗೂ ಸೈನಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇ ಒಂದು ಅಣಕು ಪ್ರದರ್ಶನ'' ಎಂದು ಹೇಳಿದರು.

ಮಂಗಳೂರು ಬಾಂಬ್ ಪ್ರಕರಣವನ್ನು "ಬಿಜೆಪಿ ಪ್ರಹಸನ" ಎಂದು ನಗೆಯಾಡಿದ ಎಚ್ ಡಿಕೆ

''ಮಂಗಳೂರಲ್ಲಿ ಬಾಂಬ್ ಪತ್ತೆಯಾಗಿದ್ದರ ಬಗ್ಗೆ ಕುಮಾರಸ್ವಾಮಿ ನಾಚಿಕೆಗೇಡಿನ ಹೇಳಿಕೆ ನೀಡಿದ್ದಾರೆ. ಅವರು ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಅವರಿಗೆ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡಬೇಕು'' ಎಂದು ಹೇಳಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಬಾಂಬ್‌': ಪೊಲೀಸ್ ಕಮಿಷನರ್ ಹರ್ಷಗೆ 6 ಪ್ರಶ್ನೆಗಳು..

''ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯರಾವ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಪೊಲೀಸರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ರಾಜಕೀಯ ಮುಖಂಡರು ಮಾಡಬಾರದು. ಸೂಕ್ಷ್ಮ ವಿಚಾರಗಳಲ್ಲಿ ತಲೆ ಹಾಕಲೇಬಾರದು'' ಎಂದು ಯತ್ನಾಳ ಹೇಳಿದರು.

English summary
Vijayapura MLA Basanagouda Patil Yatnal attack on former Chief Minister HD Kumaraswamy. When Kumaraswamy Was CM That Moment Was A Mock Show' yatnal said in vijayapura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X