ವಿಜಯಪುರ: ದೀಪಾವಳಿಗೆ ಕ್ಷೇತ್ರದ 11,000 ಸಾವಿರ ಕುಟುಂಬಗಳಿಗೆ ತಲಾ ₹2000 ಕೊಡುವುದಾಗಿ ಘೋಷಣೆ ಮಾಡಿದ ಯತ್ನಾಳ್‌

ವಿಜಯಪುರ, ಸೆಪ್ಟೆಂಬರ್‌, 27: ಹಿಂದೂ ಫೈರ್‌ ಬ್ರಾಂಡ್‌ ಅಂತಲೇ ಹೆಸರುವಾಸಿಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ದೀಪಾವಳಿ ಪ್ರಯುಕ್ತ ಕ್ಷೇತ್ರದ ಜನರಿಗೆ ಭರ್ಜರಿ ಸಿಹಿಸುದ್ದಿಯೊದನ್ನು ನೀಡಿದ್ದಾರೆ. ಆ ಸಿಹಿಸುದ್ದಿ ಏನು ಅಂತೀರಾ ಇಲ್ಲಿದೆ ನೋಡಿ ಮಾಹಿತಿ.

ಈಗಾಗಲೇ ಕಾಂಗ್ರೆಸ್‌ ಸರ್ಕಾರವು ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುತ್ತಿದೆ. ಅದೇ ರೀತಿ ಇದೀಗ ವಿಜಯಪುರ ಬಿಜೆಪಿ ಶಾಕಸ ಬಸನಗೌಡ ಪಾಟೀಲ್‌ ಯಾತ್ನಾಳ್‌ ಅವರು ದೀಪಾವಳಿಗೆ 11,000 ಕುಟುಂಬಗಳಿಗೆ ತಲಾ 2000 ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.

Yatnal announced to give ₹2000 each to Vijayapur Constituencys 11,000 thousand families for Diwali

ವಿಜಯಪುರದಲ್ಲಿ ಸೋಮವಾರ ರಾತ್ರಿ ನಡೆದ ಸರ್ವ ಗಜಾನನ ಮಂಡಳಿಗಳಿಗೆ ಸನ್ಮಾನ ಸಮಾವೇಶದಲ್ಲಿ ಅವರು ಮಾತನಾಡಿದರು, ಚುನಾವಣೆ ಸಂದರ್ಭದಲ್ಲಿ ಎಲ್ಲರೂ ಹಣ ಹಂಚಿಕೆ ಮಾಡಿ ಆಮಿಷವೊಡ್ಡುತ್ತಾರೆ. ಆದರೆ ನಾನು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಕ್ಷೇತ್ರದ 11,000 ಕುಟುಂಬಗಳಿಗೆ ತಲಾ 2,000 ಸಾವಿರ ರೂ. ನೀಡಲು ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ

ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

39 ಮಂದಿ ನವ ಜೋಡಿಗಳು ಸಾಮೂಹಿಕ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ, 37 ಮಂದಿ ಇಂದು ನವಜೀವನಕ್ಕೆ ಕಾಲಿಟ್ಟರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳಸೂತ್ರವನ್ನು ವಿತರಿಸಿ ನವಜೋಡಿಗಳಿಗೆ ಶುಭ ಹಾರೈಸಿದರು‌. ಅಲ್ಲದೆ ವರನೊಬ್ಬನ ಪೇಟ ಸರಿ ಇಲ್ಲದ್ದನ್ನು ಗಮನಿಸಿ ಅದನ್ನು ತಾವೇ ಸರಿಪಡಿಸಿ ಗಮನ ಸೆಳೆದರು.

ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು. ಇನ್ನು ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಆದ್ದರಿಂದ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದರು.

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ಮಹತ್ವದ ಘೋಷಣೆ ಮಾಡಿದರು. ಹಾಗೆಯೇ ಇದೇ ವೇಳೆ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+