ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಶ್ರಾವಣ ಮಾಸದ ಕಡೆ ಸೋಮವಾರ ಯಡಿಯೂರಪ್ಪ ಪ್ರಮಾಣ ವಚನ'

By Gururaj
|
Google Oneindia Kannada News

Recommended Video

ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಬಿ.ಎಸ್.ವೈ..!ನಿಜಾನಾ..? | Oneindia Kannada

ವಿಜಯಪುರ, ಆಗಸ್ಟ್ 21 : 'ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ. ಕಡೆಯ ಶ್ರಾವಣ ಸೋಮವಾರದಂದು ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ'.

ಹೌದು...ಇದು ಯಾವುದೋ ಜ್ಯೋತಿಷಿ ಹೇಳಿದ ಮಾತಲ್ಲ. ಮಾಜಿ ಕೇಂದ್ರ ಸಚಿವ, ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ನುಡಿದಿರುವ ಭವಿಷ್ಯ. ಇದು ನಿಜವೋ? ಎಂದು ತಿಳಿಯಲು ಶ್ರಾವಣ ಮಾಸ ಕಳೆಯುವ ತನಕ ಕಾಯಬೇಕಿದೆ.

ಬಿಜೆಪಿಯಿಂದ ಆಪರೇಷನ್ ಕಮಲ ಶುರು? ಕಾಂಗ್ರೆಸ್‌ನಲ್ಲಿ ಆತಂಕಬಿಜೆಪಿಯಿಂದ ಆಪರೇಷನ್ ಕಮಲ ಶುರು? ಕಾಂಗ್ರೆಸ್‌ನಲ್ಲಿ ಆತಂಕ

ವಿಜಪುರದಲ್ಲಿ ಬಸನಗೌಡಪಾಟೀಲ್ ಯತ್ನಾಳ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಈ ಮಾತನ್ನು ಅವರಿಗೆ ಹೇಳಿದ ಜ್ಯೋತಿಷಿ ಯಾರು? ಎಂಬುದನ್ನು ಅವರು ಬಹಿರಂಗ ಪಡಿಸಲಿದ್ದಾರೆ.

ಜಾತಕ ವಿಮರ್ಶೆ: ಎಚ್.ಡಿ.ರೇವಣ್ಣ ರಾಜಕೀಯ ಔನ್ನತ್ಯಕ್ಕೆ ಕಾಲ ಸನ್ನಿಹಿತಜಾತಕ ವಿಮರ್ಶೆ: ಎಚ್.ಡಿ.ರೇವಣ್ಣ ರಾಜಕೀಯ ಔನ್ನತ್ಯಕ್ಕೆ ಕಾಲ ಸನ್ನಿಹಿತ

ಅತ್ತ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವಿನ ಅಸಮಾಧಾನ ಗುಟ್ಟಾಗಿ ಉಳಿದಿಲ್ಲ. ಸರ್ಕಾರ ಪತನವಾಗಲಿದೆಯೇ?...

ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದೇನು?

ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದೇನು?

'ರಾಜ್ಯ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ. ಶ್ರಾವಣ ಮಾಸದ ಕೊನೆಯ ಸೋಮವಾರ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ' ಎಂದು ವಿಜಯಪುರದಲ್ಲಿ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.

'ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವುದು ನಿಶ್ಚಿತವಾಗಿದೆ. ಇದು ಲೋಕಸಭೆ ಚುನಾವಣೆಗಿಂತ ಮೊದಲು ಬರಲಿದೆ' ಎಂದು ಯತ್ನಾಳ್ ಭವಿಷ್ಯ ನುಡಿದರು.

ಹೊಂದಾಣಿಕೆ ಕೊರತೆ

ಹೊಂದಾಣಿಕೆ ಕೊರತೆ

'ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಎರಡೂ ಪಕ್ಷದಲ್ಲಿ ಹೊಂದಾಣಿಕೆಯ ಕೊರತೆ ಇದೆ. ಇದರಿಂದಾಗಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತಾಗಿದೆ' ಎಂದು ಬಸನಗೌಡಪಾಟೀಲ್ ಯತ್ನಾಳ್ ಹೇಳಿದರು.

ಇದನ್ನು ಯಾವ ಜ್ಯೋತಿಷಿ ಹೇಳಿದ್ದು ಎಂಬ ಪ್ರಶ್ನೆಗೆ ಉತ್ತರಿಸಿದ ಬಸನಗೌಡಪಾಟೀಲ್ ಯತ್ನಾಳ್ ಅವರು, 'ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ತಕ್ಷಣ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡುತ್ತೇನೆ' ಎಂದರು.

ಜಿಲ್ಲಾ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ

ಜಿಲ್ಲಾ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ

'ಬಿಜೆಪಿಯ ಜಿಲ್ಲಾ ಅಧ್ಯಕ್ಷನಾಗುವುದಿಲ್ಲ. ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿದರೆ ನಿಭಾಯಿಸುವೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವುದಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯಾಧ್ಯಕ್ಷ ಸ್ಥಾನ ಖಾಲಿಯಾಗಲಿದೆ. ಆಗ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಆಲೋಚಿಸೋಣ' ಎಂದು ಬಸನಗೌಡಪಾಟೀಲ್ ಯತ್ನಾಳ್ ಹೇಳಿದರು.

ಸರ್ಕಾರದಲ್ಲಿ ಸಮನ್ವಯವಿಲ್ಲ

ಸರ್ಕಾರದಲ್ಲಿ ಸಮನ್ವಯವಿಲ್ಲ

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸುದ್ದಿ ಹಬ್ಬಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ನಡುವಿನ ಅಸಮಾಧಾನದಿಂದಾಗಿ ಸಮನ್ವಯ ಇಲ್ಲದಂತಾಗಿದೆ.

ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಸಭೆ ಕರೆಯಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ಪ್ರವಾಹ ಪರಿಸ್ಥಿತಿಯ ನೆಪ ಹೇಳಿ ದಿನಾಂಕವನ್ನು ಮುಂದಕ್ಕೆ ಹಾಕುತ್ತಿದ್ದಾರೆ. ಆದ್ದರಿಂದ, ಇಬ್ಬರ ನಡುವೆ ಅಸಮಾಧಾನ ಉಂಟಾಗಿದೆ.

ಪರಮೇಶ್ವರ ಸಮಯ ಕೊಡುತ್ತಿಲ್ಲ

ಪರಮೇಶ್ವರ ಸಮಯ ಕೊಡುತ್ತಿಲ್ಲ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಪರಮೇಶ್ವರ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಸಮನ್ವಯ ಸಮಿತಿ ಸಭೆ ನಡೆಸಲು ಅವರು ಸಹ ಸಮಯ ಕೊಡುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಪರಮೇಶ್ವರ ಮಾತಿಗೆ ಹೆಚ್ಚು ಮನ್ನಣೆ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ ಎಂಬುದು ಪಕ್ಷದ ಮೂಲಗಳ ಮಾಹಿತಿಯಾಗಿದೆ.

English summary
Former union minister and Vijayapura city BJP MLA Basanagouda Patil Yatnal said that Congress-JD(S) alliance government will collapse soon. B.S.Yeddyurappa will take oath as Chief Minister on last Monday of Shravana masa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X