ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೇರಿಕಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಗುಂಡೇಟಿಗೆ ಓರ್ವ ಬಲಿ.!

|
Google Oneindia Kannada News

ವಾಷಿಂಗ್ಟನ್, ಮೇ 30: ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಸಾವಿಗೆ ಕಾರಣರಾದ ಬಿಳಿ ಪೊಲೀಸರ ಅಟ್ಟಹಾಸದ ವಿರುದ್ಧ ಮಿನ್ನಿಯಾಪೊಲಿಸ್ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಗುಂಡೇಟಿಗೆ ಓರ್ವ ಬಲಿಯಾಗಿದ್ದಾನೆ.

ಶನಿವಾರ ಬೆಳಗ್ಗೆ ಡೆಟ್ರಾಯಿಟ್ ಸಿಟಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದಾಗ, ಎಸ್.ಯು.ವಿ ನಲ್ಲಿದ್ದ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರ ಗುಂಪಿನ ಕಡೆಗೆ ಶೂಟ್ ಮಾಡಿದ ವ್ಯಕ್ತಿಗಾಗಿ ಪೊಲೀಸರು ಸದ್ಯ ಹುಡುಕಾಟ ನಡೆಸುತ್ತಿದ್ದಾರೆ.

ಮಿಲಿಟರಿ ಸುಪರ್ದಿಗೆ ಹೋಗಲಿದೆಯಾ ಮಿನೆಸೋಟಾದ ಮಿನ್ನಿಯಾಪೊಲಿಸ್ ನಗರ?ಮಿಲಿಟರಿ ಸುಪರ್ದಿಗೆ ಹೋಗಲಿದೆಯಾ ಮಿನೆಸೋಟಾದ ಮಿನ್ನಿಯಾಪೊಲಿಸ್ ನಗರ?

ಅತ್ತ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಕುತ್ತಿಗೆ ಮೇಲೆ ಬಲವಾಗಿ ಮಂಡಿಯೂರಿ ಕ್ರೌರ್ಯ ಮೆರೆದಿದ್ದ 'ಬಿಳಿ' ಪೊಲೀಸ್ ಡೆರೆಕ್ ಚೌವಿನ್ ವಿರುದ್ಧ ಮರ್ಡರ್ ಕೇಸ್ ಹಾಕಲಾಗಿದ್ದು, ಬಂಧಿಸಲಾಗಿದೆ.

ಪ್ರತಿಭಟನೆ ನಡೆಯುತ್ತಿರುವುದೇಕೆ.?

ಪ್ರತಿಭಟನೆ ನಡೆಯುತ್ತಿರುವುದೇಕೆ.?

ಬ್ಲಾಕ್ ಮ್ಯಾನ್ ಜಾರ್ಜ್ ಫ್ಲಾಯ್ಡ್ ಸಾವಿಗೆ ಬಿಳಿ ಪೊಲೀಸರ ಅಟ್ಟಹಾಸವನ್ನು ಖಂಡಿಸಿ ಮಿನ್ನಿಯಾಪೊಲಿಸ್ ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನೂರಾರು ಪ್ರತಿಭಟನಾಕಾರರು ವಾಣಿಜ್ಯ ಮಳಿಗೆಗಳಿಗೆ ಬೆಂಕಿ ಹೆಚ್ಚಿದ್ದಾರೆ. ಇದರಿಂದ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿದೆ.

ಇದೀಗ ಓರ್ವ ಬಲಿ

ಇದೀಗ ಓರ್ವ ಬಲಿ

ಕಳೆದ ನಾಲ್ಕು ದಿನಗಳಿಂದ ನಡೆದ ಪ್ರತಿಭಟನೆಯಲ್ಲಿ ಆಸ್ತಿ-ಪಾಸ್ತಿಗೆ ಮಾತ್ರ ಹಾನಿಯುಂಟಾಗಿತ್ತು. ಆದ್ರೆ ಇಂದು ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ ಪರಿಣಾಮ, ಓರ್ವ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ. ಇದರಿಂದ ಅಲ್ಲಿನ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಅಮೇರಿಕಾ ಅಧ್ಯಕ್ಷರ ಡೊನಾಲ್ಡ್ ಟ್ರಂಪ್ ಗೆ 'ವಾರ್ನಿಂಗ್' ಕೊಟ್ಟ ಟ್ವಿಟ್ಟರ್.!ಅಮೇರಿಕಾ ಅಧ್ಯಕ್ಷರ ಡೊನಾಲ್ಡ್ ಟ್ರಂಪ್ ಗೆ 'ವಾರ್ನಿಂಗ್' ಕೊಟ್ಟ ಟ್ವಿಟ್ಟರ್.!

ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್

ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್

ಮಿನ್ನಿಯಾಪೊಲಿಸ್ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿ ಸ್ಥಾಪಿಸಲು ಮಿಲಿಟರಿ ನಿಯೋಜಿಸುವುದಾಗಿ ಟ್ವೀಟ್ ಮಾಡಿ ಪ್ರತಿಭಟನಾಕಾರರಿಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದರು.

ಜಾರ್ಜ್ ಫ್ಲಾಯ್ಡ್ ಸಾವು ಸಂಭವಿಸಿದ್ದು ಹೇಗೆ.?

ಜಾರ್ಜ್ ಫ್ಲಾಯ್ಡ್ ಸಾವು ಸಂಭವಿಸಿದ್ದು ಹೇಗೆ.?

ಕಳೆದ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ 46 ವರ್ಷ ವಯಸ್ಸಿನ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಮೇಲೆ 'ಬಿಳಿ' ಪೊಲೀಸರು ಅಟ್ಟಹಾಸ ಮೆರೆದಿದ್ದರು. ರಸ್ತೆ ಮೇಲೆ ಬಿದ್ದ 'ಬ್ಲಾಕ್' ಜಾರ್ಜ್ ಫ್ಲಾಯ್ಡ್ ಕುತ್ತಿಗೆಯ ಮೇಲೆ 'ಬಿಳಿ' ಪೊಲೀಸ್ ಹಲವು ನಿಮಿಷಗಳ ಕಾಲ ಬಲವಾಗಿ ಮಂಡಿಯೂರಿದ್ದ ಪರಿಣಾಮ, ಜಾರ್ಜ್ ಫ್ಲಾಯ್ಡ್ ಸಾವನ್ನಪ್ಪಿದ್ದರು.

''ಉಸಿರಾಡಲು ಸಾಧ್ಯವಾಗುತ್ತಿಲ್ಲ'', ''ನನ್ನನ್ನು ಕೊಲ್ಲಬೇಡಿ'' ಎಂದು ಪದೇ ಪದೇ ಜಾರ್ಜ್ ಫ್ಲಾಯ್ಡ್ ಹೇಳುತ್ತಿದ್ದರೂ, ಆತನ ಕುತ್ತಿಗೆಯ ಮೇಲಿಂದ 'ವೈಟ್' ಪೊಲೀಸ್ ಕಾಲು ತೆಗೆಯಲಿಲ್ಲ.

ಜಾರ್ಜ್ ಫ್ಲಾಯ್ಡ್ ಮೇಲೆ ಪೊಲೀಸರು ತೋರಿದ ಮೃಗೀಯ ವರ್ತನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನತೆ ಬಿಳಿ ಪೊಲೀಸರ ಅಟ್ಟಹಾಸವನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದರು.

English summary
1 Killed after shots were fired at a crowd protesting against George Floyd Death in Minneapolis, US.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X