• search
 • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಮೆರಿಕಾದಲ್ಲಿ ಒಂದೇ ದಿನ 2168 ಜನರ ಬಲಿ ಪಡೆದ ಕೊರೊನಾವೈರಸ್!

|

ವಾಶಿಂಗ್ಟನ್, ನವೆಂಬರ್.25: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಕೊರೊನಾವೈರಸ್ ಅಟ್ಟಹಾಸ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲೇ ಮಹಾಮಾರಿಯು 2168ಕ್ಕೂ ಹೆಚ್ಚು ಜನರನ್ನು ಬಲಿ ಪಡೆದುಕೊಂಡಿದೆ.

ಪ್ರತಿನಿತ್ಯ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಲಕ್ಷದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ ವಿಶ್ವದಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣಗಳು ಅಮೆರಿಕಾದಲ್ಲಿ ವರದಿಯಾಗಿದ್ದು, ಒಂದೇ ದಿನ 1,71,769 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಕೊವಿಡ್-19 ಸೋಂಕಿತರ ಸಂಖ್ಯೆ 1,29,51,729ಕ್ಕೆ ಏರಿಕೆಯಾಗಿದೆ.

ಭಾರತೀಯರು ಕೊರೊನಾ ಲಸಿಕೆಗೆ ಎಷ್ಟು ಸನಿಹದಲ್ಲಿದ್ದಾರೆ? ಇಲ್ಲಿದೆ ಮಾಹಿತಿ

ಇಡೀ ವಿಶ್ವದ ಪೈಕಿ ಅಮೆರಿಕಾದಲ್ಲಿಯೇ ಅತಿಹೆಚ್ಚು ಜನರು ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಒಂದೇ ದಿನ ಮಹಾಮಾರಿಗೆ 2168ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯು 2,65,873ಕ್ಕೆ ಏರಿಕೆಯಾಗಿದೆ.

ಯುಎಸ್ ನಲ್ಲಿ ಈವರೆಗೆ 76 ಲಕ್ಷ ಸೋಂಕಿತರು ಗುಣಮುಖ:

ಅಮೆರಿಕಾದಲ್ಲಿ ಕೊರೊನಾವೈರಸ್ ಸೋಂಕಿತರ ಜೊತೆ ಜೊತೆಗೆ ಗುಣಮುಖರ ಸಂಖ್ಯೆಯೂ ಹೆಚ್ಚಳವಾಗಿದೆ. ದೇಶದಲ್ಲಿ ಈವರೆಗೂ 76,28,121 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 50,59,907 ಸಕ್ರಿಯ ಪ್ರಕರಣಗಳಿರುವುದಾಗಿ ಅಮೆರಿಕಾದ ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯವು ಮಾಹಿತಿ ನೀಡಿದೆ.

   ರಾಜ್ಯ ರಾಜಕಾರಣ ಅಲ್ಲೋಲ ಕಲ್ಲೋಲವಾಗಲಿದೆ ಎಂದ ಕೋಡಿ ಮಠದ ಶ್ರೀಗಳು | Oneindia Kannada

   ಇನ್ನು, ವಿಶ್ವದಲ್ಲಿ 6,00,86,074 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,13,775 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,15,33,235 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ.

   English summary
   2168 People Death From Coronavirus In Past 24 Hours In USA.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X