Breaking: ಚಿಕಾಗೋದಲ್ಲಿ ಗುಂಡಿನ ದಾಳಿಗೆ 6 ಸಾವು, 24 ಮಂದಿಗೆ ಗಾಯ
ಚಿಕಾಗೋ, ಜುಲೈ 5: ಯುನೈಟೆಡ್ ಸ್ಟೇಟ್ಸ್(ಯುಎಸ್)ನ ಚಿಕಾಗೋ ಉಪನಗರದಲ್ಲಿ ಸೋಮವಾರ ನಡೆದ ಪರೇಡ್‌ನ ವೇಳೆ ನಡೆಸಿರುವ ಗುಂಡಿನ ದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಕನಿಷ್ಠ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯ ವರದಿಗಳ ಪ್ರಕಾರ, ಸ್ವಾತಂತ್ರ್ಯೋತ್ಸವದ ಆಚರಣೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಬಂದೂಕುಧಾರಿಯು ಚಿಲ್ಲರೆ ಅಂಗಡಿಯ ಛಾವಣಿಯಿಂದ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿಯನ್ನು ಆರಂಭಿಸಿದ್ದಾನೆ.
ಹೈಲ್ಯಾಂಡ್ ಪಾರ್ಕ್‌ನ ಬೀದಿಗಳಲ್ಲಿ ಗುಂಡು ಹಾರಿಸಿದ್ದರಿಂದ ಮೆರವಣಿಗೆಯಲ್ಲಿ ಭಾಗವಹಿಸುವವರು ಇದ್ದಕ್ಕಿದ್ದಂತೆ ಭಯಭೀತರಾಗಿ ಓಡಿಹೋಗುವುದಕ್ಕೆ ಶುರು ಮಾಡಿದರು. ಪಾದಚಾರಿ ಮಾರ್ಗದಲ್ಲಿ ಕುಳಿತು ಮೆರವಣಿಗೆಯನ್ನು ವೀಕ್ಷಿಸುತ್ತಿದ್ದರು. ಆದರೆ ಗುಂಡಿನ ಸದ್ದು ಕೇಳಿ ಬರುತ್ತಿದ್ದಂತೆ ಇಡೀ ಚಿತ್ರಣವೇ ಬದಲಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ.
The moment the crowd realized there had been mass shooting in Highland Park, Illinois, at their fourth of July parade. Unfortunately there's nothing more American than this tragedy. pic.twitter.com/beXt9uYP3F
— Read Wobblies and Zapatistas (@JoshuaPotash) July 4, 2022
24 ಮಂದಿ ಆಸ್ಪತ್ರೆಗೆ ದಾಖಲು: ಗುಂಡಿನ ದಾಳಿ ನಡೆದ ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಗಾಯಗೊಂಡ 24 ಜನರನ್ನು ಹೈಲ್ಯಾಂಡ್ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಗರದ ಪೊಲೀಸ್ ಕಮಾಂಡರ್ ಕ್ರಿಸ್ ಓ'ನೀಲ್ ಹೇಳಿದ್ದಾರೆ.
ಹೈಲ್ಯಾಂಡ್ ಪಾರ್ಕ್ ನಗರದಲ್ಲಿ ಗುಂಡಿನ ದಾಳಿ ನಡೆದಿರುವ ಹಿನ್ನೆಲೆ ಜುಲೈ 4ರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಲಾಯಿತು. "ಹೈಲ್ಯಾಂಡ್ ಪಾರ್ಕ್ ಪೊಲೀಸರು ಡೌನ್‌ಟೌನ್ ಹೈಲ್ಯಾಂಡ್ ಪಾರ್ಕ್‌ನಲ್ಲಿ ನಡೆದ ಘಟನೆಗೆ ಪ್ರತಿಕ್ರಿಯಿ ನೀಡಿದರು. "ಜುಲೈ 4 ರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ದಯವಿಟ್ಟು ಡೌನ್ಟೌನ್ ಹೈಲ್ಯಾಂಡ್ ಪಾರ್ಕ್ ಅನ್ನು ಬಿಟ್ಟು, HP ಡೌನ್‌ಟೌನ್‌ನಲ್ಲಿದ್ದರೆ ಆಶ್ರಯ ಪಡೆಯಿರಿ. ಅದು ಲಭ್ಯವಾದಂತೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು, "ಎಂದು ಫೇಸ್‌ಬುಕ್‌ನಲ್ಲಿ ಸೂಚಿಸಲಾಯಿತು.

ಗನ್ ವಯಲೆನ್ಸ್ ಆರ್ಕೈವ್ ವೆಬ್‌ಸೈಟ್‌ನ ಪ್ರಕಾರ, ಆತ್ಮಹತ್ಯೆಗಳು ಸೇರಿದಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ ವರ್ಷಕ್ಕೆ ಗುಂಡಿನ ದಾಳಿಯಿಂದಲೇ ಸುಮಾರು 40,000 ಮಂದಿ ಪ್ರಾಣ ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಗನ್ ನಿಯಂತ್ರಣದ ಕುರಿತಾಗಿ ದೇಶದಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತಿದೆ. ಕಳೆದ ಮೇ ತಿಂಗಳಲ್ಲಿ ಎರಡು ಹತ್ಯಾಕಾಂಡಗಳಿಂದ ಈ ವಿಷಯವು ಮತ್ತಷ್ಟು ಗಂಭೀರತೆ ಪಡೆದುಕೊಂಡಿತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications