ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯೂಜರ್ಸಿಯಲ್ಲಿ ಮತ್ತೆ ಗುಂಡಿನ ಸದ್ದು: 6 ಮಂದಿ ಸಾವು

|
Google Oneindia Kannada News

ವಾಷಿಂಗ್ಟನ್, ಡಿಸೆಂಬರ್ 11: ಅಮರಿಕದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಅಪರಿಚಿತ ವ್ಯಕ್ತಿಗಳು ಮಾರುಕಟ್ಟೆಯಲ್ಲಿ ಮನಬಂದಂತೆ ಗುಂಡು ಹಾರಿಸಿ ಆರು ಮಂದಿಯನ್ನು ಹತ್ಯೆ ಮಾಡಿದ್ದಾರೆ.

ಟ್ರಕ್ ಒಂದರಲ್ಲಿ ನ್ಯೂಜರ್ಸಿಯ ಮಾರುಕಟ್ಟೆಗೆ ಧಾವಿಸಿದ ದಾಳಿಕೋರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಓರ್ವ ಪೊಲೀಸ್ ಸೇರಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ.

ಪೊಲೀಸರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ವ್ಯಕ್ತಿಗೆ ಗುಂಡೇಟುಪೊಲೀಸರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ವ್ಯಕ್ತಿಗೆ ಗುಂಡೇಟು

ಗುಂಡಿನ ದಾಳಿಗೆ ಪ್ರತಿರೋಧವಾಗಿ ಕಾರ್ಯಾಚರಣೆ ಆರಂಭಿಸಿದಾಗ ಓರ್ವ ಹಿರಿಯ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ.

6 Killed In New Jersey Shooting

ದಾಳಿಗೆ ಯಾವುದೇ ಭಯೋತ್ಪಾದನೆಯ ಕೋನವಿಲ್ಲವೆಂದು ಪ್ರಾಥಮಿಕ ತನಿಖೆಯಲ್ಲಿ ಅಮೆರಿಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆದರೆ ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ದಾಳಿಗೆ ಜನಾಂಗೀಯ ಅಥವಾ ಧಾರ್ಮಿಕ ದ್ವೇಷವೂ ಇರಬಹುದು ಎಂದು ಹೇಳಲಾಗಿದೆ.

ಅಮೆರಿಕದಲ್ಲಿ ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಬಲಿಯಾದ ಮೈಸೂರಿನ ಯುವಕಅಮೆರಿಕದಲ್ಲಿ ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಬಲಿಯಾದ ಮೈಸೂರಿನ ಯುವಕ

ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದು, ಸಧ್ಯದಲ್ಲೇ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ, ಶಸ್ತ್ರಾಸ್ತ್ರ ಪೂರೈಕೆಗೆ ಸಂಬಂಧಿಸಿ ಅಮರಿಕ ಸರ್ಕಾರ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಈ ರೀತಿ ಸಾರ್ವಜನಿಕ ಪ್ರದೇಶದಲ್ಲಿ ಗುಂಡಿನ ದಾಳಿಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.

ಮಾರುಕಟ್ಟೆ, ಶಾಲೆ , ಪಬ್ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಅಮೆರಿಕ ಸರ್ಕಾರದ ಚಿಂತೆಗೆ ಕಾರಣವಾಗಿದೆ.

English summary
Atleast 6 people including one police officer killed in in Jersey City, New Jersey.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X