ಅಮೆರಿಕಾದಲ್ಲಿ ಒಂದೇ ದಿನ 64267 ಮಂದಿಗೆ ಕೊರೊನಾವೈರಸ್!

ವಾಶಿಂಗ್ಟನ್, ಮಾರ್ಚ್.06: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಕೊರೊನಾವೈರಸ್ ಸೋಂಕಿನ ಹಾವಳಿ ಕಡಿಮೆಯಾಗುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಕೊವಿಡ್-19 ಲಸಿಕೆ ವಿತರಣೆ ನಡುವೆಯೂ ಒಂದೇ ದಿನ 64267 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಅಮೆರಿಕಾದಲ್ಲಿ ಈಗಾಗಲೇ ಕೊವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವವರ ಸಂಖ್ಯೆ 5.35 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1656 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 5,35,429ಕ್ಕೆ ಏರಿಕೆಯಾಗಿದೆ.

ಅಮೆರಿಕಾದಲ್ಲಿ ಕೊರೊನಾವೈರಸ್ ಸೋಂಕಿಗೆ 5 ಲಕ್ಷ ಜನರು ಸಾವು!
ದೇಶದಲ್ಲಿ ಒಟ್ಟು 2,95,90,690 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 2,01,81,244 ಸೋಂಕಿತರು ಗುಣಮುಖರಾಗಿದ್ದು, 88,74,017 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

64267 New Coronavirus Cases Reported in America in the Last 24 Hours

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:
ವಿಶ್ವದಲ್ಲಿ ಒಂದೇ ದಿನ ಒಟ್ಟು 4,34,607 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,66,47,742ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 9,317 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 25,90,968ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,22,57,239 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,17,99,535 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+