ಅಮೆರಿಕಾದಲ್ಲಿ ಒಂದೇ ದಿನ 68,428 ಮಂದಿಗೆ ಕೊರೊನಾವೈರಸ್ ಸೋಂಕು!

ವಾಶಿಂಗ್ಟನ್, ಜುಲೈ.17: ನೊವೆಲ್ ಕೊರೊನಾವೈರಸ್. ಈ ಹೆಸರು ಕೇಳಿದರೆ ದೈತ್ಯ ರಾಷ್ಟ್ರಗಳೇ ಬೆಚ್ಚಿ ಬೀಳುವಂತಾ ಪರಿಸ್ಥಿತಿ ಜಾಗತಿಕ ಮಟ್ಟದಲ್ಲಿ ಸೃಷ್ಟಿಯಾಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಜನರಲ್ಲಿ ಭಯವನ್ನು ಹುಟ್ಟಿಸುತ್ತಿದೆ.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಕಳೆದ 24 ಗಂಟೆಗಳಲ್ಲೇ 68,428 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣಾ ವರದಿಯಿಂದ ದೃಢಪಟ್ಟಿದೆ. ಒಂದೇ ದಿನ ಮಹಾಮಾರಿಗೆ 974 ಜನರು ಪ್ರಾಣ ಬಿಟ್ಟಿದ್ದಾರೆ.

ಶುಕ್ರವಾರ ಬೆಳಗ್ಗಿನ ಅಂಕಿ-ಅಂಶಗಳ ಪ್ರಕಾರ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ 36,95,025 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 16,79,633 ಸೋಂಕಿತರು ಗುಣಮುಖರಾಗಿದ್ದರೆ, 18,74,274 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇನ್ನು, ಮಹಾಮಾರಿಗೆ ಇದುವರೆಗೂ 1,41,118 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

68428 New Coronavirus Cases Reported in USA In The Last 24 Hours

ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಅಂಕಿ-ಅಂಶ:

ಜಾಗತಿಕ ಮಟ್ಟದಲ್ಲಿ ವ್ಯಾಪಿಸಿರುವ ಕೊರೊನಾವೈರಸ್ ಸೋಂಕಿಗೆ ಅಮೆರಿಕಾದಲ್ಲಿಯೇ ಅತಿಹೆಚ್ಚು ಮಂದಿ ಬಲಿಯಾಗಿದ್ದಾರೆ. ವಿಶ್ವದಲ್ಲಿ ಒಟ್ಟು 1,39,46,637 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 8,277,741 ಸೋಂಕಿತರು ಗುಣಮುಖರಾಗಿದ್ದರೆ, 5,076,219 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾವೈರಸ್ ಮಹಾಮಾರಿಗೆ ಜಗತ್ತಿನಲ್ಲಿ ಇದುವರೆಗೂ ಒಟ್ಟು 592,677 ಮಂದಿ ಉಸಿರು ಚೆಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+